ಬಳ್ಳಾರಿ: ಗಣಿನಾಡಿನಲ್ಲಿ ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶಕ್ಕೆ ಮುನ್ನ ನಾಯಕರು ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.
ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶದ ವೇದಿಕೆಯ ಸಮೀಪದಲ್ಲಿ ಮಹರ್ಷಿ ವಾಲ್ಮೀಕಿ ಅವರ ಆಕರ್ಷಕ ತದ್ರೂಪಿ ತಾತ್ಕಾಲಿಕ ಪ್ರತಿಮೆಯನ್ನು ನಿರ್ಮಿಸಿಲಾಗಿದೆ. ಈ ಪ್ರತಿಮೆ ಎಲ್ಲರ ಕುತೂಹಲದ ಕೇಂದ್ರ ಬಿಂದುವಾಗಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ಈ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಹೇಶ್ ಟೆಂಗಿನಕಾಯಿ, ಅಶ್ವತ್ಥನಾರಾಯಣ, ರಾಜ್ಯ ವಕ್ತಾರ ಮತ್ತು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
























































