ಬೆಂಗಳೂರು: ಮುಡಾ ಹಗರಣದಲ್ಲಿನ ತಪ್ಪಿತಸ್ಥರ ವಿರುದ್ದ ಕ್ರಮವಾಗಬೇಕು ಹಾಗೂ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳು ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಪಕ್ಷದ ನಾಯಕರನ್ನು ಬೆಂಗಳೂರು ಹೊರವಲಯದಲ್ಲೇ ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆಯಿತು.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ!#SidduMUDAScam #MudaScam pic.twitter.com/fPkFB1P72W
— BJP Karnataka (@BJP4Karnataka) July 12, 2024
ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು ಹಾಗೂ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರು ಹೊರವಲಯದಲ್ಲೇ ಪೊಲೀಸರು ಬಂಧಿಸಿದ್ದಾರೆ.
ಈ ಸಂದರ್ಭದಲ್ಲಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಬಿ.ವೈ.ವಿಜಯೇಂದ್ರ, ಮಾತೆತ್ತಿದರೆ ಸಂವಿಧಾನ ರಕ್ಷಣೆ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ’ ಎಂದು ದೂರಿದರು.
ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನು ಒಪ್ಪಿಕೊಳ್ಳದ ಸಿಎಂ ಸಿದ್ದರಾಮಯ್ಯನವರು ಬಿಜೆಪಿಯ ಪ್ರತಿಭಟನೆಯನ್ನು ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ದೂರಿದರು.