ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಹೈಕಮಾಂಡ್ ಸ್ಟಾರ್ ಪ್ರಚಾರಕರನ್ನು ಆಖಾಡಕ್ಕೆ ಕಳುಹಿಸಿಕೊಟ್ಟಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಪ್ರಚಾರದ ಅಖಾಡಕ್ಕೆ ಧುಮುಕಿದೆ. ಈ ತಿಂಗಳ 29ರಂದು ಮೋದಿಯವರು ರೋಡ್ ಶೋ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ನೈಸ್ ರೋಡ್‌ನಲ್ಲಿ ಸವಾರಿ ಕೈಗೊಳ್ಳಲಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಸಚಿವ ಎಸ್.ಟಿ. ಸೋಮಶೇಖರ್, ಇದೇ ಏ.29ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ನೈಸ್ ರೋಡ್ ಜಂಕ್ಷನ್ ಮೂಲಕ ಯಶವಂತಪುರ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನೈಸ್ ರೋಡ್ ಜಂಕ್ಷನ್ ನಿಂದ ಸುಂಕದಕಟ್ಟೆ ವರೆಗೆ ರೋಡ್ ಶೋ ಆಯೋಜಿಸಲಾಗಿದೆ ಎಂದು ತಿಳಿಸಿದರು, ಮೋದಿಯವರ ಈ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಲಿದ್ದಾರೆ ಎಂದು ಎಸ್‌ಟಿ.ಸೋಮಶೇಖರ್ ತಿಳಿಸಿದರು.