ಬೆಂಗಳೂರು:: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಸಂಶೋಧನಾ ವಿದ್ಯಾರ್ಥಿ ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.
ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಪ್ರೊ.ವಿಜಯಲಕ್ಷ್ಮಿ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎ ರಿ-ಲುಕ್ ಅಟ್ ಪೆಸೆಂಟ್ ಅಪ್ರೈಸಿಂಗ್ಗ್ಸ್ ಇನ್ ಕರ್ನಾಟಕ ಡ್ಯೂರಿಂಗ್ 19th ಸೆಂಚುರಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.







































































