ದೆಹಲಿ: ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿದ್ದು ಲಸಿಕೆ ಲಬ್ಯತೆ ಬಗ್ಹೆಯೂ ಅನುಮಾನ ಕಾಡುತ್ತಿತ್ತು. ಇದೀಗ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಖರೀದಿಗೆ ಸರ್ಕಾರಗಳು ಕ್ರಮ ಕೈಗೊಂಡಿವೆ. ಇದೇ ವೇಳೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ತಯಾರಿಸಿರುವ ದೇಶಿ ಕೋವಿಡ್ -19 ಲಸಿಕೆ, ಕೋವಾಕ್ಸಿನ್’ಗೆ ಕೇಂದ್ರ ಸರ್ಕಾರ ದರ ನಿಗದಿ ಮಾಡಿದೆ.
ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 600 ರೂಪಾಯಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ 1200 ರೂ. ಬೆಲೆ ನಿಗದಿಪಡಿಸಿದೆ.