ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ದ ರೈತ ಸಂಘಟನೆಗಳು, ಪ್ರತಿಪಕ್ಷಗಳು ಸಿಡಿದೆದ್ದಿವೆ. ಕೃಷಿ ಕಾಯ್ದೆ ವಿರೋಧಿಸಿ ಸುದೀರ್ಘ ಹೋರಾಟದ ನಂತರ ಇಂದು ಮತ್ತೆ ಭಾರತ್ ಬಂದ್ ಮೂಲಕ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತವಾಯಿತು.
ಕರ್ನಾಟಕ ಕಿಸಾನ್ ಕಾಂಗ್ರೆಸ್ ನೇತೃತ್ವದಲ್ಲಿ ಕನಕಪುರ ಬಳಿ ಬಾರತ್ ಬಂಂದ ಬೆಂಬಲಿಸಿ ಹೋರಾಟ ನಡೆಯಿತು.
ಭಾರತ್ ಬಂದ್ ಕರೆ ಬೆಂಬಲಿಸಿ ರಾಜ್ಯದಲ್ಲೂ ಪ್ರತಿಭಟನೆ ನಡೆದವು. ಕೆಪಿಸಿಸಿ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ಅವರ ಕರೆಯಂತೆ ಜಿಲ್ಲಾ ಕೇಂದ್ರಗಳಲ್ಲಿ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಂಗಳೂರು ಉತ್ತರ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಜೋತಿಸ್ ಕುಮಾರ್ ನೇತೃತ್ವದಲ್ಲಿ ಕನಕಪುರ ಮುಖ್ಯರಸ್ತೆ ಆರ್ಟ್ ಆಫ್ ಲಿವಿಂಗ್ ಮುಂಬಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಮುಖಂಡರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.