ರಾಮನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಭಾರತ್ ಬಂದ್‌ಗೆ ರಾಮನಗರ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.
ರಾಮನಗರ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೇತೃತ್ವದಲ್ಲಿ ಇಂದು ಮುಂಜಾನೆ 6-00 ಗಂಟೆಗೆ ರಾಮನಗರ ಟೌನ್ ಐಜೂರು ವೃತ್ತದಲ್ಲಿ ಬೃಹತ್ ಪ್ರತಿಭಟನೆ ನೆಡೆಸಲಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು.