ಬೆಂಗಳೂರು: ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರದಾಸ್ ಎಕ್ಕಾರು ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಾಪ ಸೂಚಿಸಿದ್ದಾರೆ.
ಡಿ.ದೇವರಾಜ ಅರಸು ಪ್ರಶಸ್ತಿ ಪುರಸ್ಕøತರಾದ ಭಾಸ್ಕರದಾಸ್ ಅವರು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಬ್ರಹ್ಮಕಲಶೋತ್ಸವದಲ್ಲಿ ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಎಕ್ಕಾರು ಗ್ರಾಮ ಪಂಚಾಯಿತಿಯ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅಲೆಮಾರಿ ಜನಾಂಗದ ಶ್ರೇಯೋಭಿವೃದ್ಧಿಗೆ ಅವರು ಹೋರಾಟ ಮಾಡಿದ್ದರು ಎಂದು ಸ್ಮರಿಸಿದ್ದಾರೆ. ಅವರ ಕುಟುಂಬದವರು, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಆರೆಸ್ಸೆಸ್ ಕರ್ನಾಟಕ ದಕ್ಷಿಣ ಪ್ರಾಂತ್ಯದ ಧರ್ಮ ಜಾಗರಣದ ಸಮನ್ವಯ ಪರಿಯೋಜನಾ ಪ್ರಮುಖ್, ಅಲೆಮಾರಿ ಜನಾಂಗದ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸಿದ, ಕೃಷಿಕರೂ, ನನ್ನ ಆತ್ಮೀಯ ಮಿತ್ರರಾದ ಶ್ರೀ ಭಾಸ್ಕರ್ ದಾಸ್ ಎಕ್ಕಾರ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬಕ್ಕೆ, ಹಿತೈಷಿಗಳಿಗೆ ಭಗವಂತ ಈ ದು:ಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥನೆ. pic.twitter.com/U6WkQJC9VS
— Nalinkumar Kateel (@nalinkateel) November 6, 2022



















































