ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಸಂಜೆ ಬೀದರ್ ನಗರದಲ್ಲಿ ರೋಡ್ ಶೋ ನಡೆಸಿದರು. ಬಿಜೆಪಿಗೆ ಮತ ಕೊಟ್ಟು ಗೆಲ್ಲಿಸುವಂತೆ ಅವರು ಜನತೆಯಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ್ ಖುಬಾ, ಬೀದರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಈಶ್ವರ್ ಸಿಂಗ್ ಠಾಕೂರ್, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ, ಸ್ಥಳೀಯ ಬಿಜೆಪಿ ಮುಖಂಡರು, ನೂರಾರು ಕಾರ್ಯಕರ್ತರು, ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನಸಾಮಾನ್ಯರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು.






















































