ಬೀದರ್: ತೀವ್ರ ಕುತೂಹಲ ಕೆರಳಿಸಿದ್ದ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಸಾಗರ್ ಖಂಡ್ರೆ ಅವರು 1 ಲಕ್ಷ 25 ಸಾವಿರ ಅಧಿಕ ಮತಗಳಿಂದ ಗೆದ್ದು ಬೀಗಿದ್ದಾರೆ.
ಮತ ಎಣಿಕೆಯುದ್ದಕ್ಕೂ ಸಾಗರ್ ಖಂಡ್ರೆ ಮುನ್ನಡೆ ಸಾಧಿಸುತ್ತಾ ಬಂದರು. ಈ ಮೂಲಕ ಗೆಲುವು ಸಾಧಿಸಿದ ಅವರು, 2 ವರ್ಷ ಸಂಸದರಾಗಿ ಕೇಂದ್ರ ಸಚಿವರಾಗಿದ್ದ ಖೂಬಾಗೆ ಹ್ಯಾಟ್ರಿಕ್ ಗೆಲುವಿನ ಕನಸನ್ನು ಭಗ್ನಗೊಳಿಸಿದರು.
ಮಾಜಿ ಸಚಿವ ಭೀಮಣ್ಣ ಖಂಡ್ರೆ ಮೊಮ್ಮಗ, ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಪ್ರಥಮ ಬಾರಿ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. 26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಚಿಕ್ಕ ಸಂಸದನಾಗಿ ಆಯ್ಕೆ ಆಗಿದ್ದಾರೆ.






















































