ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 8 ನೇ ಆವೃತ್ತಿ ಕೊನೆಗೊಳ್ಳುತ್ತಿದೆ. ಕೊರೋನಾ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಕಠಿಣ ನಿಯಮಾವಳಿಗಳಿಂದಾಗಿ ಸಿನಿಮಾ ಹಾಗೂ ಧಾರವಾಹಿಗಳ ಶೂಟಿಂಗ್‌ಗೆ ಅಡ್ಡಿಯಾಗಿದೆ.
ಇದೇ ಸಂದರ್ಭದಲ್ಲಿ ‘ಬಿಗ್ ಬಾಸ್’ ಶೋ ಕೂಡಾ ಅರ್ಧಕ್ಕೆ ನಿಲ್ಲುತ್ತಿದೆ. ಈ ನಡುವೆ ಹೊರ ಜಗತ್ತಿನ ವಿದ್ಯಮಾನಗಳಿಂದ ದೂರ ಉಳೀದಿದ್ದ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದ್ದೇ ತಡ, ಎಲ್ಲರೂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅದರ ಪ್ರೋಮೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
https://www.instagram.com/p/COqaakMn72j/