ಬೆಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ಕಿಚ್ಚ ಸುದೀಪ್ಗೆ ಏನಾಗಿದೆ? ಈ ರೀತಿಯ ಪ್ರಶ್ನೆ ಕನ್ನಡ ಸಿನಿಮಾ ಲೋಕದ ಮಂದಿಯನ್ನು ಕಾಡುತ್ತಿದೆ. ಅದರಲ್ಲೂ ಅಭಿಮಾನಿಗಳು ಕಿಚ್ಚನ ಆರೋಗ್ಯದ ವಿಚಾರದಲ್ಲಿ ಆತಂಕಕ್ಕೊಳಗಾಗಿದ್ದಾರೆ.
ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ‘ಬಿಗ್ ಬಾಸ್’ನ ವಾರಂತ್ಯದ ಶೋ ಕಿಚ್ಚನಿಲ್ಲದೆ ಸಾಗಿತ್ತು. ಅನಾರೋಗ್ಯದ ಕಾರಣದಿಂದಾಗಿ ಕಿಚ್ಚ ಪಾಲ್ಗೊಳ್ಳುತ್ತಿಲ್ಲ ಎಂದು ಹೇಳಲಾಗಿತ್ತು.
ಅನಂತರ ಕೆಲವು ದಿನಗಳ ಹಿಂದಷ್ಟೇ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ತಾವು ಚೇತರಿಸಿಕೊಂಡಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಮುಂದಿನ ಶನಿವಾರದ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿಯೂ ಹೇಳಿಕೊಂಡಿದ್ದರು. ತಮ್ಮ ಚೇತರಿಕೆಗಾಗಿ ಹಲವರು ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದರು. ಆ ವೀಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ. ಎಲ್ಲರಿಗೂ ‘ಲವ್ ಯೂ ಆಲ್’ ಪದದೊಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Thanks for the prayers and wshs,,I'm better now n looking forward to attend BB this week. Many thanks to Dr.Venkatesh n Dr.Vinay for having taken so mch care.
Received many videos frm temples where prayers were being offered fo my health. I can only say "luv you all"
🙏🏼🙏🏼🙏🏼— Kichcha Sudeepa (@KicchaSudeep) April 29, 2021
ಇನ್ನೇನು ಈ ವಾರ ಸುದೀಪ್ ಅವರು ಬಿಗ್ ಬಾಸ್ ವಾರಾಂತ್ಯದ ಕಾರ್ಯಕ್ರಮದಲ್ಲಿ ಪ್ರತ್ಯಕ್ಷವಾಗುತ್ತಾರೆ ಎಂದು ಕಾತುರದಿಂದ ಇರುವ ಅಭಿಮಾನಿಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಜಿದೆ. ಸುದೀಪ್ ಅವರು ಈ ವಾರಾಂತ್ಯದ ಕಾರ್ಯಕ್ರಮದಲ್ಲೂ ಭಾಗಿಯಾಗುವುದಿಲ್ಲ ಎಂದು ವಾಹಿನಿಯ ಮೂಲಗಳು ತಿಳಿಸಿವೆ.
ಈ ಕುರಿತಂತೆ ಟ್ವೀಟ್ ಮಾಡಿರುವ ವಾಹಿನಿ, ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಎಂದಿದೆ.
ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ. #BBK8 #ಬಿಗ್ಬಾಸ್ಕನ್ನಡ8
— Colors Kannada (@ColorsKannada) April 30, 2021
‘ಬಿಗ್ ಬಾಸ್’ ಚಿತ್ರೀಕರಣ ನಿರಂತರ ಸಾಗುತ್ತಿದೆ. ಹೀಗಿರುವಾಗ ವಾರಾಂತ್ಯದ ಕಾರ್ಯಕ್ರಮದ ಶೂಟಿಂಗ್ಗೆ ಅಡ್ಡಿಯೇ ಎಂಬ ಪ್ರಶ್ನೆ ಅಭಿಮಾನಿಗಳದ್ದಾಗಿದೆ.