ತುಮಕೂರು: ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯ ಕೇಂದ್ರಬಿಂದುವಾಗುತ್ತಿರುವ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್ನನ್ನು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.
ಕೃಷಿ ಹೊಂಡದಂಥ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು ಎಂಬ ಆರೋಪ ಪ್ರತಾಪ್ ಮೇಲಿದೆ. ಬಾಂಬ್ ಬ್ಲಾಸ್ಟ್ ರೀತಿಯಾ ಘನನೆಯನ್ನು ಪ್ರತಾಪ್ ಅವರು ವೀಡಿಯೊ ಚಿತ್ರೀಕರ ಮಾಡಿದ್ದರೆನ್ನಲಾಗಿದೆ. ಈ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತಲ್ಲದೆ ಪರಿಸರವಾದಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.
ಈ ಸಂಬಂಧ ಪ್ರಕರಣ ದಾಖಲಿಸಿದ್ದ ಪೊಲೀಸರು ಸ್ಫೋಟಕ ವಸ್ತು ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಡ್ರೋನ್ ಪ್ರತಾಪ್ ಅವರನ್ನು ಬಂಧಿಸಿದ್ದಾರೆ.