ಪಾಟ್ನಾ: ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ಜೆಡಿ ಬೆಂಬಲದೊಂದಿಗೆ 18 ತಿಂಗಳ ಹಿಂದೆ ರಚನೆಯಾಗಿದ್ದ ಮಹಾಮೈತ್ರಿಕೂಟಕ್ಕೆ ಅಂತ್ಯ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಂತ್ಯ ಹಾಡಿದ್ದಾರೆ. ನಿರೀಕ್ಷೆಯಂತೆಯೇ ಅವರು ಬಿಹಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ನಿವಾಸದಲ್ಲಿ ಜನತಾ ದಳ (ಯುನೈಟೆಡ್) ಶಾಸಕರೊಂದಿಗೆ ಸಭೆ ನಡೆಸಿದ ನಂತರ, ನಿತೀಶ್ ಕುಮಾರ್ ಅವರು ಜೆಡಿಯುನ ಹಿರಿಯ ಸಚಿವ ಬಿಜೇಂದ್ರ ಯಾದವ್ ಅವರು ನಿತೀಶ್ ಕುಮಾರ್ಜೊತೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು.
Bihar Chief Minister #NitishKumar submitted his resignation to governor Rajendra Vishwanath Arlekar. Grand Alliance Government has been dissolved. Talking to the media in Patna after resignation he said everything was not alright with RJD, so he made the decision. pic.twitter.com/1lwLOOYnBf
— All India Radio News (@airnewsalerts) January 28, 2024
ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲರು ಹೊಸ ಸರ್ಕಾರ ರಚನೆಯಾಗುವವರೆಗೆ ನಿತೀಶ್ ಕುಮಾರ್ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಸೂಚನೆ ನೀಡಿದ್ದಾರೆ. ಇದೀಗ ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಅಧ್ಯಕ್ಷರೂ ಆಗಿರುವ ನಿತೀಶ್ ಕುಮಾರ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ರಚಿಸುವ ತಯಾರಿಯಲ್ಲಿದ್ದಾರೆ.
ಬಿಹಾರದಲ್ಲಿನ ಈ ಬೆಳವಣಿಗೆ ಮುಂಬರುವ ಲೋಕಸಭಾ ಚುನಾವಣಾ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. ಬಿಹಾರ ವಿಧಾನಸಭೆಯಲ್ಲಿ 40-ಸದಸ್ಯರನ್ನು ಹೊಂದಿರುವ ಬಿಜೆಪಿ, ಈ ರಾಜ್ಯದಿಂದ 17 ಸಂಸದರನ್ನು ಲೋಕಸಭೆಗೆ ಗೆದ್ದುಕೊಟ್ಟಿದೆ. ಜೆಡಿ(ಯು) 16. ಹಾಗೂ ಎನ್ಡಿಎ ಮಿತ್ರಪಕ್ಷವಾದ ಎಲ್ಜೆಪಿಯು ಎರಡು ಸ್ಥಾನಗಳನ್ನು ಹೊಂದಿವೆ. ಇದೀಗ ಹೊಸ ಬೆಳವಣಿಗೆಯು ಬಿಜೆಪಿ ನೇತೃತ್ವದ ಎನ್ಡಿಎಗೆ ವರದಾನವಾಗಿ ಪರಿಣಮಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.























































