ಬೆಂಗಳೂರು: ಬರದ ಭೀಕರತೆಯ ಸಂದರ್ಭದಲ್ಲಿ ಪರಿಹಾರ ಕಾರ್ಯಕ್ಕೆ ಮುಂದಾಗುವ ಬದಲು ದುಬಾರಿ ಕಾರುಗಳನ್ನು ಖರೀದಿಸಲು ಸಿದ್ದರಾಮಯ್ಯ ಸರ್ಕಾರ ಆದ್ಯತೆ ನೀಡಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ.
“ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು” ಇದು ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಮಾಡುತ್ತಿರುವ ಪರಿ ಎಂದು ಬಿಜೆಪಿ ಬಣ್ಣಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಶತಮಾನದಲ್ಲಿಯೇ ಕಂಡು ಕೇಳರಿಯದಂತಹ ಭೀಕರ ಬರ ಎದುರಾದರೂ ರೈತರಿಗೆ ಬರ ಪರಿಹಾರ ನೀಡುವಲ್ಲಿ ರಾಜಕೀಯ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ದುಬಾರಿ ಕಾರುಗಳನ್ನು ಖರೀದಿಸಲು ಅನುಮೋದನೆ ನೀಡಿದ್ದಾರೆ. ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲ. ಇಂತಹ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಮೇ 7 ರಂದು ಪ್ರತಿಯೊಬ್ಬ ನಾಡಿನ ಹೆಮ್ಮೆಯ ರೈತರು ತಕ್ಕ ಉತ್ತರ ನೀಡಬೇಕು ಎಂದು ಪ್ರತಿಪಾದಿಸಿದೆ.
"ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು" ಇದು @INCKarnataka ಸರ್ಕಾರ ರಾಜ್ಯವನ್ನು ದಿವಾಳಿ ಮಾಡುತ್ತಿರುವ ಪರಿ.
ಶತಮಾನದಲ್ಲಿಯೇ ಕಂಡು ಕೇಳರಿಯದಂತಹ ಭೀಕರ ಬರ ಎದುರಾದರೂ ರೈತರಿಗೆ ಬರ ಪರಿಹಾರ ನೀಡುವಲ್ಲಿ ರಾಜಕೀಯ ಮಾಡಿದ ಸಿಎಂ @siddaramaiah ಅವರು, ದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ದುಬಾರಿ ಕಾರುಗಳನ್ನು… pic.twitter.com/TLNt9EEekv
— BJP Karnataka (@BJP4Karnataka) May 6, 2024