ಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿರುವಂತಿದೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ದೇಶದ್ರೋಹಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ‘ವಿಧಾನಸೌಧದಲ್ಲಿಯೇ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿ ದುಷ್ಕರ್ಮಿಗಳು ಈಗ ರಸ್ತೆ-ರಸ್ತೆಗಳಲ್ಲಿ ದೇಶದ್ರೋಹಿ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ. ಇದೆ ನಿಟ್ಟಿನಲ್ಲಿ ನೆನ್ನೆ ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲೂ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿರುವ ಘಟನೆ ಕಡು ದೇಶದ್ರೋಹ ಕೃತ್ಯವಾಗಿದೆ’ ಎಂದು ಆರೋಪಿಸಿದ್ದಾರೆ.
ಧರ್ಮಸ್ಥಳವಾಯಿತು, ಸಾಂಪ್ರದಾಯಿಕ ದಸರಾ ಉತ್ಸವಕ್ಕೆ ಕಳಂಕ ಹಚ್ಚಲು ನಿರ್ಧರಿಸಲಾಯಿತು, ಮದ್ದೂರು ಹಾಗೂ ರಾಜ್ಯದ ಇತರೆಡೆಗಳಲ್ಲಿ ಗಣೇಶೋತ್ಸವದ ಮೇಲೆ ಕಲ್ಲು ತೂರಿಸಿ ಕರ್ನಾಟಕದ ಶಾಂತಿ ಹದಗೆಡಿಸಲು ಹೊರಟಿದ್ದಾರೆ ಎಂದು ಆರೋಪಿಸಿರುವ ವಿಜಯೇಂದ್ರ, ಕರ್ನಾಟಕವನ್ನು
ಕಾಂಗ್ರೆಸ್ ಸರ್ಕಾರ ಏನು ಮಾಡಲು ಹೊರಟಿದೆ? ಎಂದು ಪ್ರಶ್ನಿಸಿದ್ದಾರೆ. ಈ ರೀತಿಯ ದೇಶದ್ರೋಹಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.
'ಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿರುವಂತಿದೆ.
ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿ ದುಷ್ಕರ್ಮಿಗಳು ಈಗ ರಸ್ತೆ-ರಸ್ತೆಗಳಲ್ಲಿ ದೇಶದ್ರೋಹಿ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ. ಇದೆ ನಿಟ್ಟಿನಲ್ಲಿ ನೆನ್ನೆ ಭದ್ರಾವತಿಯಲ್ಲಿ ನಡೆದ… pic.twitter.com/XzHZ1VGiZK
— Vijayendra Yediyurappa (@BYVijayendra) September 9, 2025




























































