ಬೆಂಗಳೂರು: ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆಸುಮಾರು 4.75 ಲಕ್ಷ ರೂ ಹಣವನ್ನು ಹಿಂದಿರುಗಿಸುವಂತೆ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿರುವ ಬೆಳವಣಿಗೆ ರಾಜಕೀಯ ನಾಯಕರ ಜಟಾಪಟಿಗೆ ಕಾರಣವಾಗಿದೆ.
ಈ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ,
ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು
ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ.ಹಿಂದೂ ಆಚಾರ-ವಿಚಾರ… pic.twitter.com/pdYmt0pL8E
— Vijayendra Yediyurappa (Modi Ka Parivar) (@BYVijayendra) January 23, 2024