ಬೆಂಗಳೂರು: ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಭಾರೀ ಬದಲಾವಣೆ ನಡೆದಿದೆ. ಮುಂಬರುವ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಸಮರಕ್ಕೆ ರಣವ್ಯೂಹ ರಚಿಸುತ್ತಿರುವ ಬಿಜೆಪಿ ಇದೀಗ ತನ್ನ ಸಂಸದೀಯ ಮಂಡಳಿಗೆ ಮೇಜರ್ ಸರ್ಜರಿ ಮಾಡಿದೆ.
ಕುತೂಹಲಕಾರಿ ಬೆಳವಣಿಗೆಯಲ್ಲಿ ಕರ್ನಾಟಕದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ರಾಷ್ಟ್ರೀಯ ಮಟ್ಟದಲ್ಲಿ ನಾಯಕತ್ವ ನೀಡುವ ಸಂಬಂಧ ರತ್ನಗಂಬಳಿ ನೀಡಿದೆ. ಯಡಿಯೂರಪ್ಪ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರನ್ನಾಗಿ ಮಾಡಲಾಗಿದೆ.
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧ್ಯಕ್ಷರಾಗಿದ್ದು, ಹೊಸ ಸಮಿತಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿ.ಎಲ್.ಸಂತೋಷ್, ಸರ್ಬಾನಂದ್ ಸೋನಾವಲ್, ಬಿ.ಎಸ್. ಯಡಿಯೂರಪ್ಪ ಸೇರಿ ಹಲವರು ಸ್ಥಾನ ಪಡೆದಿದ್ದಾರೆ.
ಪಕ್ಷದ ಪ್ರಮುಖ ನಿರ್ಧಾರಗಳನ್ನು ಸಂಸದೀಯ ಮಂಡಳಿ ಕೈಗೊಳ್ಳುವುದರಿಂದ ಕರ್ನಾಟಕ ರಾಜಕಾರಣದ ಪಾಲಿಗೆ ಈ ಬೆಳವಣಿಗೆ ಭಾರೀ ಮಹತ್ವ ಪಡೆದುಕೊಂಡಿದೆ.
New additions to BJP Parliamentary Board – BS Yediyurappa, Sarbananda Sonowal, K Laxman.
The Board, headed by the party's national president JP Nadda, will also have PM Narendra Modi, Defence Minister Rajnath Singh and Union Home Minister Amit Shah. pic.twitter.com/RXbRfDDetz
— ANI (@ANI) August 17, 2022
ಕರ್ನಾಟಕ ಪ್ರದೇಶ ಬಿಜೆಪಿ ಘಟಕದಲ್ಲಿ ಅದಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮಾರ್ಗದರ್ಶನ ಮಾಡುತ್ತಿರುವ ಯಡಿಯೂರಪ್ಪ ಅವರು, ಇದೀಗ ಪಕ್ಷ ಸಂಘಟನೆಗಾಗಿ ಮತ್ತೊಮ್ಮೆ ರಾಜ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ಇದೇ ಸಂದರ್ಭದಲ್ಲಿ ಬಿಎಸ್‌ವೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಸ್ಥಾನ ಸಿಕ್ಕಿರುವುದು ರಾಜ್ಯ ಬಿಜೆಪಿ ಪಾಲಿಗೂ ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಪಕ್ಷದ ಮುಖಂಡರು ಬಣ್ಣಿಸಿದ್ದಾರೆ.






















































