ಬೆಂಗಳೂರು: ಶಿಸ್ತಿನ ಪಕ್ಷ ಎಂದೇ ಗುರುತಾಗಿರುವ ಭಾರತೀಯ ಜನತಾ ಪಕ್ಷದಲ್ಲಿ ಇದೀಗ ಅಶಿಸ್ತಿನ ಆರೋಪ ಪ್ರತಿಧ್ವನಿಸುತ್ತಿದೆ. ಬಿಜೆಪಿ ನಾಯಕರ ಬಗ್ಗೆ, ವಿವಾದಾತ್ಮಕ ಹೇಳಿಕೆ ನೀಡುತ್ತಾ ವಿವಾದದ ಕೇಂದ್ರಬಿಂದುವಾಗುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದೆ.
ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಆಗಾಗ್ಗೆ ಹೇಳಿಕೆ ನೀಡುತ್ತಿರುವ ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೀಡಿದೆ ಎನ್ನಲಾಗುತ್ತಿದೆ.
ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಹಲವು ವೇದಿಕೆಗಳಲ್ಲಿ ಬಹಿರಂಗ ಹೇಳಿಕೆ ನೀಡಿದ್ದಲ್ಲದೆ, ಹಲವು ಬಾರಿ ನಿಮಗೆ ಎಚ್ಚರಿಕೆ ನೀಡಿದ್ದರೂ ಮುಂದುವರಿಸಿದ್ದೀರಿ ಎಂದು ಅಸಮಾಧಾನ ಹೊರಹಾಕಿರುವ ಹೈಕಮಾಂಡ್, ಈ ಆರೋಪ ಬಗ್ಗೆ ಕೂಡಲೇ ವಿವರಣೆ ನೀಡಬೇಕೆಂದು ಸೂಚಿಸಿದೆ.