ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯರು ಸಭೆ ಸೇರಿ ಮುಂದಿನ ವಿಧಾನಪರಿಷತ್ ಉಪ ಚುನಾವಣೆ, ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆ ಕುರಿತು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾಗಿ ಚರ್ಚೆ ಆಗಿದೆ. ಚರ್ಚಿತ ಅಂಶಗಳ ಕುರಿತಂತೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಅತಿ ಶೀಘ್ರವೇ ಅಭ್ಯರ್ಥಿಗಳ ಘೋಷಣೆಗೆ ತೀರ್ಮಾನಿಸಿದ್ದೇವೆ. ಅರ್ಥಪೂರ್ಣ ಚರ್ಚೆ ನಡೆದಿದೆ. ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗುವ ಸಮಸ್ಯೆ ಇಲ್ಲ ಎಂದು ನುಡಿದರು.
ಲೋಕಸಭೆ ಚುನಾವಣೆ ಸಂಬಂಧ ಮುಂದಿನ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಮಾನ್ಯ ಯಡಿಯೂರಪ್ಪನವರು, ಜಡಿಎಸ್‍ನ ಮಾನ್ಯ ಕುಮಾರಸ್ವಾಮಿಯವರು ಸೇರಿ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ವಿಷಯದಲ್ಲಿ ಗೊಂದಲ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾದ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು.
ಫೆಬ್ರವರಿ 16 ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಾಗೂ ಮುಂಬರುವ ವಿಧಾನ ಪರಿಷತ್ ಚುನಾವಣೆಗಳಿಗೆ ಸಂಬಂಧಿಸಿದಂತೆ ಮಾನ್ಯ @BSYBJP ಅವರ ನಿವಾಸದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾನ್ಯ @hd_kumaraswamy
ಅವರ ನೇತೃತ್ವದಲ್ಲಿ ಪ್ರಮುಖರೊಂದಿಗೆ ಮಾತುಕತೆ ನಡೆಸಲಾಯಿತು.
ಈ ನಿಟ್ಟಿನಲ್ಲಿ ಕಾರ್ಯಕರ್ತರಲ್ಲಿ ಗೊಂದಲಕ್ಕೆ… pic.twitter.com/AF0OodLEfB— Vijayendra Yediyurappa (Modi Ka Parivar) (@BYVijayendra) January 21, 2024


























































