ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ.
ಫೆ.19 ರಾತ್ರಿ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಇರುವ ಅವರು, ಫೆ. 20ರಂದು ಬೆಳಿಗ್ಗೆ ಉಡುಪಿಯಲ್ಲಿ ಬೂತ್ ಮಟ್ಟದ ಸಮಾವೇಶ, ಮಧ್ಯಾಹ್ನ ಬೈಂದೂರಿನಲ್ಲಿ ಸಾರ್ವಜನಿಕ ಸಭೆ, ಸಂಜೆ ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ, ಶೃಂಗೇರಿಯಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳುವರು.
ಫೆ.21ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಪ್ರಬುದ್ಧರ ಸಭೆ, ಮಧ್ಯಾಹ್ನ ಬೇಲೂರಿನ ಸಾರ್ವಜನಿಕ ಸಭೆ ಹಾಗೂ ಸಂಜೆ ಹಾಸನದ ಬೂತ್ ಮಟ್ಟದ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಅವರು ಬೆಂಗಳೂರಿನಿಂದ ದೆಹಲಿಗೆ ಹಿಂತಿರುಗುವರು ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ.