ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗೆಗಿನ ಚರ್ಚೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇನ್ನೆರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ನಾಯಕತ್ವ ಬದಲಾವಣೆ ಚರ್ಚೆ ಇಲ್ಲ. ಯಡಿಯೂರಪ್ಪನವರೇ ಎರಡು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು.
ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಎರಡು ದಿನ ರಾಜ್ಯದಲ್ಲಿ ಇರಲಿದ್ದಾರೆ. ಅವರ ಜೊತೆ ಮಾತನಾಡಲು ಅಪೇಕ್ಷೆ ಇರುವವರು ಬಂದು ಮಾತನಾಡುತ್ತಾರೆ ಎಂದವರು ಹೇಳಿದರು.