ಬೆಂಗಳೂರು: ಬಿ.ಎಸ್.ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಅವರುಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಹೊಸ ಸಿಎಂ ಯಾರಾಗುತ್ತಾರೆ ಎಂಬ ಕುತೂಹಲ ಇತ್ತು.
ಇಂದು ಸಂಜೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದೆ. ಈ ಮೂಲಕ ನೂತ ಸಿಎಂ ಆಗಿ ಅವರನ್ನು ನೇಮಕ ಮಾಡಲಾಯಿತು.
ದೆಹಲಿಯಲ್ಲಿ ವರಿಷ್ಠರ ಸೂಚನೆಯಂತೆ, ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಅರುಣ್ ಸಿಂಗ್ ಉಪಸ್ಥಿತಿಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು ಆಯ್ಕೆ ಮಾಡಲಾಗಿದೆ.