ಬೆಂಗಳೂರು: ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು “ಮಾತಾಡ್ ಮಾತಾಡ್ ಕನ್ನಡ” ಅಭಿಯಾನ ಅಂಗವಾಗಿ ನಡೆದ ಕಾರ್ಯಕ್ರಮ ಗಮನಸೆಳೆಯಿತು.
ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತ್‍ಕುಮಾರ್, ಶಾಸಕರಾದ ಸಂಜೀವ ಮಠಂದೂರು, ಪ್ರತಾಪ್‍ಸಿಂಹ ನಾಯಕ್, ಬಿಜೆಪಿ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮತ್ತು ಚುನಾವಣಾ ಆಯೋಗದ ಸಂಯೋಜಕರಾದ ದತ್ತಗುರು ಹೆಗಡೆ, ಮೊದಲಾದ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾದರು.
ಇದೇ ಸಂದರ್ಭದಲ್ಲಿ ಬಿಬಿಎಂಪಿ ಫ್ರೌಢಶಾಲೆಯ ವಿದ್ಯಾರ್ಥಿಗಳು, ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಹಾಗೂ ಸಿಬ್ಬಂದಿಗಳು “ಜೋಗದ ಸಿರಿ ಬೆಳಕಿನಲ್ಲಿ”, “ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು” ಮತ್ತು “ಹಚ್ಚೇವು ಕನ್ನಡದ ದೀಪ” – ಹಾಡುಗಳನ್ನು ಇಂಪಾಗಿ ಹಾಡುವ ಮೂಲಕ ಕನ್ನಡದ ಕಂಪು ಪಸರಿಸಿದರು.