ದೆಹಲಿ: ಪಂಚ ರಾಜ್ಯಗಳ ಚುನಾವಣೆ ನಂತರ ಕರ್ನಾಟಕದ ಬಗ್ಗೆ ಚಿತ್ತ ಹರಿಸಿರುವ ಬಿಜೆಪಿ ವರಿಷ್ಠರು ರಹಸ್ಯ ಕಾರ್ಯತಂತ್ರದಲ್ಲಿ ತೊಡಗಿದ್ದಾರೆ. ಈ ಹಂತದಲ್ಲಿ ಮುಂದಿನ ವಾರ ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆ ಕುತೂಹಲ ಮೂಡಿಸಿದೆ.
ದೆಹಲಿಯಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ 16 ಮತ್ತು 17 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡುಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ ಎಂದರು.
ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಮಿಕ್ಕ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ. ಇಲ್ಲಿಯ ವರಿಷ್ಠರು, ನಾಯಕರು, ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ ಎಂದರು.



















































