ದಾವಣಗೆರೆ: ರಾಜ್ಯದಲ್ಲಿ ಹಿರಿಯ ನಾಯಕರು ರಾಜಕಾರಣದಿಂದ ಹಿಂದೆ ಸರಿಯುತ್ತಿರುವ ಬೆಳವಣಿಗೆಗಳು ನಡೆಯುತ್ತಿದೆ. ಕೆಲವು ಸಮಯದ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ದೂರ ಸರಿಯುವುದಾಗಿ ಘೋಷಿಸಿದ್ದರು. ಅನಂತರ ‘ಕುಂದಾಪುರದ ವಾಜಪೇಯಿ’ ಖ್ಯಾತಿಯ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕೂಡಾ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ಮೂಲಕ ಬಿ.ಎಸ್.ಯಡಿಯೂರಪ್ಪ ಅವರ ಹಾದಿಯನ್ನು ಅನುಸರಿದರು. ಇದೀಗ ದಾವಣಗೆರೆ ಜಿಲ್ಲೆಯ ಮುತ್ಸದ್ದಿ ನಾಯಕ ಎಸ್.ಎ.ರವೀಂದ್ರನಾಥ್ ಕೂಡಾ ನಿವೃತ್ತಿ ಘೋಷಿಸಿದ್ದಾರೆ.
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಮಾಜಿ ಸಚಿವರೂ ಆದ ಎಸ್.ಎ. ರವೀಂದ್ರನಾಥ್ ಅವರು, ಮಂಗಳವಾರ ದಾವಣಗೆರೆ ತಾಲೂಕಿನ ಶಿರಮಗೊಂಡನ ಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಮ್ಮ ನಡೆ ಬಗ್ಗೆ ಘೋಷಿಸಿದರು.
ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ನಾನೇ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.