ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಕಾರ್ಯತಂತ್ರದಲ್ಲಿ ತೊಡಗಿದೆ. ಪ್ರಧಾನಿ ಮೋದಿ ಮೋಡಿ ಮೂಲಕ ಮತಗಳಿಕೆಗೆ ಕಸರತ್ತು ನಡೆಸುತ್ತಿರುವ ಕಮಲ ಸೈನ್ಯ ಪಕ್ಷದ ರಾಷ್ಟ್ರೀಯ ವರಿಷ್ಠರನ್ನು ಸಾಲು ಸಾಲಾಗಿ ಕರೆಸಿಕೊಳ್ಳಲು ತೀರ್ಮಾನಿಸಿದೆ.
ಈ ನಡುವೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜನವರಿ 5 ಮತ್ತು 6ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ. ಮಧ್ಯಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣವ್ಯೂಹ ನಿರ್ಮಿಸುವ ಪ್ರಯತ್ನ ಬಿಜೆಪಿಯದ್ದಾಗಿದ್ದು, ಸಮುದಾಯಗಳ ಮಠಗಳಿಗೆ ಭೇಟಿ, ಸಮುದಾಯಗಳ ಸಮಾವೇಶಗಳನ್ನು ಹಮ್ಮಿಕೊಂಡಿದೆ. ಜೆ.ಪಿ. ನಡ್ಡಾ ಅವರ ಕರ್ನಾಟಕ ಭೇಟಿ ವೇಳೆಯೂ ಈ ರೀತಿ ಹಲವು ಕಾರ್ಯಕ್ರಮಗಳನ್ನು ರಾಜ್ಯ ಬಿಜೆಪಿ ಹಮ್ಮಿಕೊಂಡಿದೆ.
ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಗಳು ಹೀಗಿವೆ:
ಜನವರಿ 5ರಂದು ಮಧ್ಯಾಹ್ನ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆ. ಸಿದ್ಧಗಂಗಾ ಮಠಕ್ಕೆ ಭೇಟಿ.ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ.
ಎಸ್ಸಿ-ಎಸ್ಟಿ-ಒಬಿಸಿ ಕಾರ್ಯಕರ್ತರ ಸಮಾವೇಶ
ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿ.
ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆ.
ಜನವರಿ 6ರಂದು ಬೆಳಿಗ್ಗೆ ಹರಿಹರದ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕ ಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ
ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ
ಸಂಜೆ ತುಮಕೂರು ಜಿಲ್ಲೆ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆ.














































































ಜನವರಿ 5ರಂದು ಮಧ್ಯಾಹ್ನ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆ. ಸಿದ್ಧಗಂಗಾ ಮಠಕ್ಕೆ ಭೇಟಿ.