ಬೆಂಗಳೂರು: ಪಕ್ಷವನ್ನು ಬಲಪಡಿಸಲು ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರುು ನಾಯಕರಿಗೆ ಕರೆ ನೀಡಿದ್ದಾರೆ.
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ವಿಭಾಗವು ಬಿಜೆಪಿಗೆ ತೀವ್ರ ಪೈಪೋಟಿ ನೀಡಲಿರುವ ವಿಭಾಗ ಎಂದು ಒತ್ತಿ ಹೇಳಿದ ಅವರು, ಪಕ್ಷದ ಸದಸ್ಯರು ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷ ಮತ್ತು ರಾಷ್ಟ್ರಕ್ಕಾಗಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಏಪ್ರಿಲ್ 13ರಂದು ತಮ್ಮ ವಿಭಾಗೀಯ ಪ್ರವಾಸದ ಮೊದಲ ಹಂತವನ್ನು ಪೂರ್ಣಗೊಳಿಸಿದ ನಳಿನ್ ಕಮಾರ್ ಕಟೀಲ್ ಅವರು ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಸೇರಿದಂತೆ ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆಯ ಪ್ರಗತಿಯನ್ನು ಪರಿಶೀಲಿಸಿದರು. ಇವರೊಂದಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಂಪುಟ ಸಚಿವರಾದ ಕೆ ಎಸ್ ಈಶ್ವರಪ್ಪ, ವಿ.ಸೋಮಣ್ಣ, ಕೆ ಸಿ ನಾರಾಯಣಗೌಡ, ಎಸ್ ಟಿ ಸೋಮಶೇಖರ್, ಕೆ ಗೋಪಾಲಯ್ಯ, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಮತ್ತು ಬಿಜೆಪಿ ಕರ್ನಾಟಕ ಉಪಾಧ್ಯಕ್ಷರು, ಎಂ.ರಾಜೇಂದ್ರ ಮತ್ತು ತೇಜಸ್ವಿನಿ ಅನಂತಕುಮಾರ್ ಅವರುಗಳು ಉಪಸ್ಥಿತರಿದ್ದರು.
ಭಾರತದಲ್ಲಿ ಬಿಜೆಪಿ ಮಾತ್ರ ನಿಜವಾದ ಪ್ರಜಾಸತ್ತಾತ್ಮಕ ಪಕ್ಷವಾಗಿರುವುದರಿಂದ, ಅದು ಯಾವಾಗಲೂ ಕಾರ್ಯಕರ್ತರ ಧ್ವನಿಯನ್ನು ಕೇಳಲು ಒತ್ತು ನೀಡಿದೆ ಎಂದು ನುಡಿದ ಕಟೀಲ್ ಅವರು, ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖರೊಂದಿಗೆ ಸಂವಾದ ನಡೆಸಿ ವಿಭಾಗಗಳಿಂದ ಶಕ್ತಿ ಕೇಂದ್ರಗಳವರೆಗೆ ಸಂಘಟನಾ ರಚನೆಯನ್ನು ಪರಿಶೀಲಿಸಿದರು. ಅವರು ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ಆಂತರಿಕ ಮಾಹಿತಿ ಕಲೆಹಾಕಿ ಕಾರ್ಯಕರ್ತರಿಂದ ಇತರ ಸಲಹೆಗಳನ್ನು ಸಂಗ್ರಹಿಸಿದರು.
ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಗುಂಪುಗಾರಿಕೆ ಮಾಡದಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು. ಪಕ್ಷ ಮತ್ತು ಆ ಮೂಲಕ ರಾಷ್ಟ್ರದ ಸೇವೆ ಮಾಡಲು ಒಗ್ಗೂಡಬೇಕು ಎಂದು ಅವರು ಒತ್ತಾಯಿಸಿದರು. ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಕರ್ತರ ಉತ್ಸಾಹವನ್ನು ಕಾಂಗ್ರೆಸ್ಸಿನ ಕಾರ್ಯಕರ್ತರ ಉತ್ಸಾಹಕ್ಕೆ ಹೋಲಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ಸಿನ ವಿಫಲ ಸದಸ್ಯತ್ವ ಡ್ರೈವ್ಗಳು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ಸಿನ ಅಪ್ರಸ್ತುತತೆಯನ್ನು ಗುರುತಿಸಿದರೆ, ದೇಶಾದ್ಯಂತ ಇತ್ತೀಚೆಗಷ್ಟೇ ನಡೆದ ಚುನಾವಣೆಗಳಲ್ಲಿ 5 ರಾಜ್ಯಗಳಲ್ಲಿ ಹೇಳ ಹೆಸರಿಲ್ಲದಂತೆ ಕಾಂಗ್ರೆಸ್ ಮಾಯವಾಗಿ ಹೋಗಿದ್ದು ರಾಷ್ಟ್ರೀಯ ಮಟ್ಟದಲ್ಲಿ ಅದರ ಪ್ರಸ್ತುತತೆಯ ಅಂತ್ಯವನ್ನು ಗುರುತಿಸಿದೆ ಎಂದರು. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿಯ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಾದಿಸಿದ ಅಭಿವೃದ್ಧಿಯ ದೂರದೃಷ್ಟಿಯನ್ನು ರಾಜ್ಯದ ಜನತೆಗೆ ಕೊಂಡೊಯ್ಯಲು ಹವಣಿಸುತ್ತಿದ್ದಾರೆ ಎಂದು ಹೇಳಿದರು.
ಜಾತ್ಯತೀತ ಜನತಾ ದಳವು ಕೆಲವೇ ಜಿಲ್ಲೆಗಳಿಗೆ ಸೀಮಿತವಾದ ಮತ್ತು ಭವಿಷ್ಯವಿಲ್ಲದ ಉಪ-ಪ್ರಾದೇಶಿಕ ಪಕ್ಷವಾಗಿದೆ ಎಂದ ಕಟೀಲ್, 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಗುರಿಗೆ ಮೈಸೂರು ವಿಭಾಗವು ಪ್ರಮುಖ ಕೊಡುಗೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಚಿತ ವ್ಯಾಕ್ಸಿನೇಷನ್ ಡ್ರೈವ್ಗಳು, ಉಕ್ರೇನ್ನಿಂದ 22,000 ಕ್ಕೂ ಹೆಚ್ಚು ಭಾರತೀಯರನ್ನು ತುರ್ತು ಸ್ಥಳಾಂತರಿಸುವಿಕೆ ಮತ್ತು ಇತರ ಯೋಜನೆಗಳ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳು ಸೇರಿದಂತೆ ಬಿಜೆಪಿ ಕೈಗೊಂಡ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅವರು ಕಾರ್ಯಕರ್ತರನ್ನು ಉತ್ತೇಜಿಸಿದರು. ಕೇವಲ ಬಿಜೆಪಿ ಕರ್ನಾಟಕದಾದ್ಯಂತ ಅಸ್ತಿತ್ವ ಹೊಂದಿರುವ ಪಕ್ಷವಾಗಿದ್ದು, ರಾಜ್ಯದ ಎಲ್ಲಾ ಜನರ ಧ್ವನಿಯನ್ನು ಪ್ರತಿನಿಧಿಸುವ ಜವಾಬ್ದಾರಿಯನ್ನು ಪಕ್ಷ ಹೊಂದಿದೆ. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು ವೈಯಕ್ತಿಕವಾಗಿ ಎಲ್ಲ ಪ್ರದೇಶಗಳ ಜನರನ್ನು ಹಾಗೂ ಕಾರ್ಯಕರ್ತರನ್ನು ತಲುಪುತ್ತಿದ್ದಾರೆ. ಮೂರು ವಿಭಾಗಗಳ ಸಭೆಗಳು ಸಂಪನ್ನಗೊಂಡಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನಾಯಕರೆಲ್ಲರೂ ತಮ್ಮ ಸ್ವಕ್ಷೇತ್ರಗಳಿಗೆ ತೆರಳಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಇದೇ ಏಪ್ರಿಲ್ 18ರಿಂದ ವಿಭಾಗ ಮಟ್ಟದ ಸಭೆಗಳನ್ನು ಪುನಃ ಪ್ರಾರಂಭಿಸುತ್ತಾರೆ ಎಂದು ಹೇಳಿದರು.