ಬೆಂಗಳೂರು: ರಾಜ್ಯಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆ ಕೇಸರಿ ಪಾಳಯದ ಚಟುವಟಿಕೆಗಳಿಗೆ ಚುರುಕು ನೀಡಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಸಚಿವರು, ಶಾಸಕರು ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರ ಸಮಾಗಮಕ್ಕೆ ಸಾಕ್ಷಿಯಾಯಿತು.
ಹಿಂದುಳಿದ ವರ್ಗಗಳ ಮೋರ್ಚಾ ,ಬಿ.ಜೆ.ಪಿ.
ಕರ್ನಾಟಕದ ವತಿಯಿಂದ ಮಲ್ಲೇಶ್ವರಂನ ಹವ್ಯಕ ಮಹಾಸಭಾ ಸಭಾಂಗಣದಲ್ಲಿ ರಾಜ್ಯ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು. ಸಚಿವರಾದ ಬಿ.ಎ.ಬಸವರಾಜ್, ಕೋಟ ಶ್ರೀನಿವಾಸಪೂಜಾರಿ ಕಾರ್ಯಕ್ರಮ ಉದ್ಘಾಾಟಿಸಿದರು. ಹಿಂದುಳಿದ ವರ್ಗಗಳ ಮೋರ್ಚಾಾದ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರಬಾಬು ಮಾಜಿ ಸಚಿವರಾದ ಮಾಲಿಕಯ್ಯ ಗುತ್ತೇದಾರ್ ಈ ವೇಳೆ ಉಪಸ್ಥಿತರಿದ್ದರು.
ಕುಂಬಾರ ಕಲೆ ಮಡಿಕೆ ತಯಾರು ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವೈಖರಿ ಗಮನಸೆಳೆಯಿತು.
ಅಧ್ಯಕ್ಷರಾದ ನೆ.ಲ.ನರೇಂದ್ರಬಾಬು ಮಾತನಾಡಿ, ಸಂಘಟನೆ ಹಾಗೂ ಸರ್ಕಾರದ ಕಾರ್ಯಕ್ರಮದ ಪ್ರತಿ ಮನೆಗೆ ತಲುಪಬೇಕು. ಪ್ರಧಾನಿ ನರೇಂದ್ರ ಮೋದಿರವರ ಕಂಡ ಕನಸು ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಅಭಿವೃದ್ದಿ ಚಿಂತನೆಗಳು ನಾಡಿಗೆ ತಲುಪಬೇಕು ಎಂದರು.
ರಾಜ್ಯದಲ್ಲಿ ಶೇಕಡ 64ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಹಿಂದುಳಿದ ವರ್ಗದ ಸಮಾಜ ಮಂಚೂಣಿಗೆ ಬರಬೇಕು. ಆಗ ಮಾತ್ರ ದೇಶ ಅಭಿವೃದ್ದಿ ಸಾಧ್ಯ ಎಂದು ಹೇಳಿದರು.
ಸಚಿವರಾದ ಕೋಟ ಶ್ರೀನಿವಾಸಪೂಜಾರಿ ಮಾತನಾಡಿ, ರಾಜ್ಯದಲ್ಲಿ ಧ್ವನಿ ಇಲ್ಲದೇ ಇರುವ ಹಿಂದುಳಿದ ವರ್ಗದ ಜನರಿಗೆ ಶಕ್ತಿ ತುಂಬವ ಕೆಲಸ ಮಾಡಬೇಕು. ಹಿಂದುಳಿದ ವರ್ಗದವರು ಎಲ್ಲರು ಒಗ್ಗಾಟ್ಟಬೇಕು ಎಂದರು.
ಸಚಿವರಾದ ಭೈರತಿ ಬಸವರಾಜ್ ಮಾತನಾಡಿ, ಹಿಂದುಳಿದವರ್ಗದಲ್ಲಿ ಜನಿಸಿ, ಗ್ರಾಮ ಪಂಚಾಯಿತಿಯಿಂದ ಬಂದು ಇಂದು ಸಚಿವನಾಗಿ ಕಾರ್ಯನಿರ್ವಹಿಸಿದ ಬಗ್ಗೆ ಹೆಮ್ಮೆಆನಿಸುತ್ತದೆ ಎಂದರು.
ರಾಜ್ಯದ ಹೆಚ್ಚಿನ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗದವರು ಇದ್ದಾರೆ. ಆಯಾ ಕ್ಷೇತ್ರದಲ್ಲಿ ಸಂಘಟನೆ ಮಾಡಿ .ಮುಂದಿನ ಬಜೆಟ್ ನಲ್ಲಿ ಹಿಂದುಳಿದ ವರ್ಗದ ಜನರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪರವರಿಗೆ ಮನವಿ ಮಾಡಲಾಗುವುದು ಎಂದು ಬಸವರಾಜ್ ತಿಳಿಸಿದರು.