ಬೆಂಗಳೂರು: ತಾನು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಟೀಕಾಸ್ತ್ರ ಪ್ರಯೋಗಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಸಮಾಜವಾದಿ ಅಲ್ಲ, ‘ಮಜಾವಾದಿ’ ಎಂದು ಬಿಜೆಪಿ ಪಕ್ಷವು ವೀಡಿಯೋ ವೈರಲ್ ಸನ್ನಿವೇಶದತ್ತ ಬೊಟ್ಟು ಮಾಡಿದೆ.
ದೆಹಲಿ ಪ್ರವಾಸದ ಸಂದರ್ಭದಲ್ಲಿ ಖಾಸಗಿ ವಿಮಾನದಲ್ಲಿ ವಿಭಿನ್ನ ಫೋಸ್ ನೀಡಿ ಮಾಡುರುವ ವೀಡಿಯೋವನ್ನು ಸಚಿವ ಜಮೀರ್ ಅಹಮದ್ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಹಂಚಿಕೊಂಡಿದ್ದಾರೆ. ‘ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು..’ ಎಂಬ ಸಾಲುಗಳನ್ನು ಹಾಕಿ ಜಮೀರ್ ಸಂಭ್ರಮಿಸಿದ್ದಾರೆ.
ಈ ವೀಡಿಯೋ ಬಗ್ಗೆ ನೆಟ್ಟಿಗರನೇಕರು ಬಗೆಬಗೆಯಲ್ಲಿ ಕಮೆಂಟ್ ಮಾಡಿದರೆ, ಪ್ರತಿಪಕ್ಷ ಬಿಜೆಪಿ ತನ್ನದೇ ಆದ ಪ್ರತಿಕ್ರಿಯೆ ಮೂಲಕ ಸಿಎಂ ಸಿದ್ದರಾಮಯ್ಯ ಸರ್ಕಾರದ ವೈಖರಿ ಬಗ್ಗೆ ಟೀಕಾಸ್ತ್ರ ಪ್ರಯೋಗಿಸಿದೆ.
ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ ಎಂದಿರುವ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ. ಆದರೆ, ಮಜವಾದಿ ಸಿದ್ದರಾಮಯ್ಯ ಮತ್ತು ಅವರ ಅತ್ಯಾಪ್ತ ಸಚಿವ ಜಮೀರ್ ಅಹ್ಮದ್ ಅವರ ಆಡಂಬರಕ್ಕೇನು ಕಡಿಮೆ ಇಲ್ಲ ಎಂದಿದೆ. ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ಬಿಜೆಪಿ ಉದಾಹರಿಸಿದೆ.
ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ.@INCKarnataka ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ.
ಆದರೆ, ಮಜವಾದಿ @siddaramaiah ಮತ್ತು ಅವರ ಅತ್ಯಾಪ್ತ @BZZameerAhmedK ಅವರ ಆಡಂಬರಕ್ಕೇನು ಕಡಿಮೆ ಇಲ್ಲ.
ಜನರ ತೆರಿಗೆ… https://t.co/1vb2xSIv6W
— BJP Karnataka (@BJP4Karnataka) December 21, 2023




































































