ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರೆಂಟಿ ಭರವಸೆ ಇದೀಗ ಸಂಚಲನ ಸೃಷ್ಟಿಸಿದೆ. ‘ವಾರ್ಷಿಕ 1 ಲಕ್ಷ ಹಾಗೂ ತಿಂಗಳಿಗೆ 8 ಸಾವಿರ ರೂ ಕೊಡುತ್ತೇವೆಂಬ’ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಭರವಸೆ ಇದೀಗ ಮಹಿಳೆಯರಲ್ಲಿ ಗೊಂದಲ ಸೃಷ್ಟಿಸಿದೆ. ತಮ್ಮ ಖಾತೆಗೆ ಹಣ ಬಂದೇ ಬರುತ್ತೆ ಎಂಬ ಆಸೆಯಿಂದ ಖಾತೆ ತೆರೆಯಲು ಮಹಿಳೆಯರು ಪೋಸ್ಟ್ ಆಫೀಸ್’ಗಳಲ್ಲಿ ಮುಗಿಬಿದ್ದಿದ್ದಾರೆ.
ರಾಹುಲ್ ಗಾಂಧಿಯವರ ‘ಟಕಾ ಟಕ್’ ಭಾಷಣವೇ ಮಹಿಳೆಯರ ಗ್ಯಾರೆಂಟಿ ಆಸೆಯನ್ನು ನೂರ್ಮಡಿಗೊಳಿಸಿದ್ದು, ಈ ಕಾರಣದಿಂದಾಗಿ ಅಂಚೆ ಕಚೇರಿಗಳು ಜನಜಾತ್ರೆಗೆ ಸಾಕ್ಷಿಯಾಗುತ್ತಿದೆ. ಈ ಬೆಳವಣಿಗೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ, ‘ಜನರ ಬಡತನವನ್ನು ಬಂಡವಾಳ ಮಾಡಿಕೊಂಡು ಬೊಗಳೆ ಬಿಡುವುದು, ಅಮಾಯಕರನ್ನು ದಿಕ್ಕು ತಪ್ಪಿಸುವುದು, ಸ್ವಾತಂತ್ರ್ಯಾ ನಂತರದಿಂದಲೂ ಕಾಂಗ್ರೆಸ್ ಅನುಸರಿಸಿಕೊಂಡು ಬಂದಿರುವ ಚಾಳಿ’ ಎಂದು ಆಕ್ರೋಶ ಹೊರಹಾಕಿದೆ.
ಜನರ ಬಡತನವನ್ನು ಬಂಡವಾಳ ಮಾಡಿಕೊಂಡು ಬೊಗಳೆ ಬಿಡುವುದು, ಅಮಾಯಕರನ್ನು ದಿಕ್ಕು ತಪ್ಪಿಸುವುದು, ಸ್ವಾತಂತ್ರ್ಯಾ ನಂತರದಿಂದಲೂ ಕಾಂಗ್ರೆಸ್ ಅನುಸರಿಸಿಕೊಂಡು ಬಂದಿರುವ ಚಾಳಿ.
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಬಿಟ್ಟಿ ಭಾಗ್ಯಗಳನ್ನೇ ಮುಂದಿಟ್ಟುಕೊಂಡು ಇಡೀ ದೇಶದ ಮತದಾರರಿಗೆ, ಅದರಲ್ಲೂ ಮಹಿಳೆಯರಿಗೆ ಟೋಪಿ ಹಾಕಲು ಹೋಗಿ @RahulGandhi ಬಾಯಿಂದ… pic.twitter.com/kCBVvMvC1U— Vijayendra Yediyurappa (Modi Ka Parivar) (@BYVijayendra) May 30, 2024
ಈ ಕುರಿತಂತೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ‘ಜನರ ಬಡತನವನ್ನು ಬಂಡವಾಳ ಮಾಡಿಕೊಂಡು ಬೊಗಳೆ ಬಿಡುವುದು, ಅಮಾಯಕರನ್ನು ದಿಕ್ಕು ತಪ್ಪಿಸುವುದು, ಸ್ವಾತಂತ್ರ್ಯಾ ನಂತರದಿಂದಲೂ ಕಾಂಗ್ರೆಸ್ ಅನುಸರಿಸಿಕೊಂಡು ಬಂದಿರುವ ಚಾಳಿ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಬಿಟ್ಟಿ ಭಾಗ್ಯಗಳನ್ನೇ ಮುಂದಿಟ್ಟುಕೊಂಡು ಇಡೀ ದೇಶದ ಮತದಾರರಿಗೆ, ಅದರಲ್ಲೂ ಮಹಿಳೆಯರಿಗೆ ಟೋಪಿ ಹಾಕಲು ಹೋಗಿ ರಾಹುಲ್ ಗಾಂಧಿ ಬಾಯಿಂದ ಹೊರಟ ‘ವಾರ್ಷಿಕ 1 ಲಕ್ಷ ಹಾಗೂ ತಿಂಗಳಿಗೆ 8 ಸಾವಿರ ರೂ ಕೊಡುತ್ತೇವೆಂಬ’ ಚುನಾವಣಾ ಪ್ರಚಾರದ ‘ಟಕಾಟಕ್’ ಡೋಂಗಿ ಡೈಲಾಗ್ ನಂಬಿ ಬೆಂಗಳೂರಿನಲ್ಲಿ ನಿದ್ರೆಗೆಟ್ಟು ಮಹಿಳೆಯರು ಬೆಳಗಿನ ಜಾವ 4 ಗಂಟೆಗೆ ಸರತಿ ಸಾಲಿನಲ್ಲಿ ನಿಂತು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಗಿಬಿದ್ದಿರುವ ಘಟನೆ ನಿಜಕ್ಕೂ ಬೇಸರ ತರಿಸುವಂತದ್ದು ಎಂದಿದ್ದಾರೆ.
ತಪ್ಪು ಗ್ರಹಿಕೆಯಿಂದ ಹಸು-ಗೂಸುಗಳನ್ನು ಕೈಗೆತ್ತಿಕೊಂಡು ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಅನಗತ್ಯ ಸಂಕಷ್ಟ ಪಡುತ್ತಿರುವ ಮುಗ್ಧ ಮಹಿಳೆಯರನ್ನು ನೋಡಿಯಾದರೂ ಕಾಂಗ್ರೆಸ್ಸಿಗರ ಮನ ಕಲಕುತ್ತಿಲ್ಲವೆಂದರೆ, ಕಾಂಗ್ರೆಸ್ಸಿಗರ ಹೃದಯ ಹೀನತೆ ಹಾಗೂ ಭಂಡತನ ಎತ್ತಿ ತೋರಿಸುತ್ತದೆ. ಬಡ ಜನರೊಂದಿಗೆ ಚೆಲ್ಲಾಟವಾಡುವುದನ್ನು ಬಿಟ್ಟು ಈಗಲಾದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಮಾಯಕ ಮಹಿಳೆಯರಿಗೆ ವಾಸ್ತವತೆ ತಿಳಿಸಿ ಅವರ ಕ್ಷಮೆಯಾಚಿಸಲಿ, ಇಲ್ಲದಿದ್ದರೆ ತಪ್ಪು ಗ್ರಹಿಕೆಯಿಂದ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಮಹಿಳೆಯರಿಗೆ ವಾಸ್ತವ ಸಂಗತಿ ಅರಿವಾದರೆ ಉಂಟಾಗುವ ಪರಿಸ್ಥಿತಿಯ ಪರಿಣಾಮ ಕಾಂಗ್ರೆಸ್ಸಿಗರೇ ಅನುಭವಿಸಬೇಕಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.


























































