ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರುಕಾರು ಬಿಟ್ಟು ಸೈಕಲ್ ಏರಿ ಗಮನಸೆಳೆದರು.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯದಾದ್ಯಂತ ಸೈಕಲ್ ಜಾಥಾ ನಡೆಸಿದರು. ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಬಳಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜಾಥಾ ನಡೆಯಿತು. ನಾಯಕರಾದ ಅಶ್ವತ್ಥನಾರಾಯಣ ಸಹಿತ ಹಲವರು ಭಾಗಿಯಾದರು. ಈ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಬೆಲೆ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದೇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ತಮ್ಮ ಭಂಡತನವನ್ನು ತೊರೆದು ಬೆಲೆ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇನೆ.
– ಶ್ರೀ… pic.twitter.com/ju0Vw5HifZ
— BJP Karnataka (@BJP4Karnataka) June 20, 2024
ಜಾಥಾ ಆರಂಭವಾಗುತ್ತಿದ್ದಂತೆಯೇ ತಡೆಯೊಡ್ಡಿದ ಪೊಲೀಸರು, ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು. ಪೊಲೀಸರ ಬಲಪ್ರಯೋಗಕ್ಕೆ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.
Live : ಮಾಧ್ಯಮವನ್ನುದ್ದೇಶಿಸಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra https://t.co/zdyJc2R8vQ
— BJP Karnataka (@BJP4Karnataka) June 20, 2024