ಬೆಂಗಳೂರು: ರಾಜ್ಯ ಬಿಜೆಪಿ ಇದೀಗ ರೌಡಿ ಸಾಮ್ರಾಜ್ಯದ ರೂಪ ಪಡೆಯುತ್ತಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ಸಂದರ್ಭದಲ್ಲಿ ಉಂಟಾದ ಜಟಾಪಟಿ ಇದೀಗ ತೀವ್ರಗೊಂಡಿದ್ದು, ಈ ವಿಚಾರದಲ್ಲಿ ಬಿಜೆಪಿಯನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುತ್ತಿವೆ.
ಇದೇ ವೇಳೆ, ಬಿಜೆಪಿಯಲ್ಲಿ ರೌಡಿ ಮೋರ್ಚಾ ಆರಂಭಕ್ಕೆ ಸಿದ್ದತೆ ನಡೆಸಿದೆ ಎಂದು ಕಾಂಗ್ರೆಸ್ ವ್ಯಾಖ್ಯಾನಿಸಿದೆ. ಬಿಜೆಪಿಯು ರೌಡಿ ಮೋರ್ಚಾ ಆರಂಭಿಸಿದ್ದು, ಪ್ರಮುಖ 60 ರೌಡಿಗಳು ಈ ಮೋರ್ಚಾಗೆ ಸೇರಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ವ್ಯಂಗ್ಯವಾಡಿದ್ದಾರೆ.
ಮೊದಲ ಹಂತದಲ್ಲಿ ಈಗಾಗಲೇ 36 ರೌಡಿ ಶೀಟರ್ಗಳು ಸೇರ್ಪಡೆ ಆಗಿದ್ದು, 24 ರೌಡಿಗಳ ಸೇರ್ಪಡೆ ಬಾಕಿ ಇದೆ ಎಂದಿರುವ ಅವರು, ರಾಜ್ಯದಲ್ಲಿ ಒಟ್ಟು 150 ರೌಡಿಗಳನ್ನು ಸೇರಿಸಿಕೊಳ್ಳಲು ಬಿಜೆಪಿಯವರು ಪಟ್ಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ರೌಡಿ ಮೋರ್ಚಾ ಆರಂಭಿಸಿದ್ದು, ಪ್ರಮುಖ 60 ರೌಡಿಗಳು ಈ ಮೋರ್ಚಾಗೆ ಸೇರಲು ಮುಂದಾಗಿದ್ದಾರೆ.
ಮೊದಲ ಹಂತದಲ್ಲಿ ಈಗಾಗಲೇ 36 ರೌಡಿ ಶೀಟರ್ ಗಳು ಸೇರ್ಪಡೆ ಆಗಿದ್ದು, 24 ರೌಡಿಗಳ ಸೇರ್ಪಡೆ ಬಾಕಿ ಇದೆ.
ರಾಜ್ಯದಲ್ಲಿ ಒಟ್ಟು 150 ರೌಡಿಗಳನ್ನ ಸೇರಿಸಿಕೊಳ್ಳಲು ಬಿಜೆಪಿಯವರು ಪಟ್ಟಿ ಮಾಡಿದ್ದಾರೆ.
– ಎಂ. ಲಕ್ಷ್ಮಣ್, ಕೆಪಿಸಿಸಿ ವಕ್ತಾರರು pic.twitter.com/Y5ILZbjInE— Karnataka Congress (@INCKarnataka) December 6, 2022