ಹುಬ್ಬಳ್ಳಿ: ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಇಲ್ಲ. ಈ ವಿಚಾರದಲ್ಲಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿಎಂದು ಹೇಳುತ್ತಾ ಪ್ರತಿಪಕ್ಷ ಬಿಜೆಪಿ ನಾಯಕರು ಸುಳ್ಳು ಹೇಳುತ್ತಾ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ, ಬರೀ ಸುಳ್ಳು ಅಪ್ರಚಾರ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಇಲ್ಲ, ಅಭಿವೃದ್ಧಿ ಕೆಲಸಗಳು ದುಡ್ಡು ಇಲ್ಲದೆ ನಿಂತಿದಿದೆ ಎಂಬುದನ್ನು ಬಿಜೆಪಿ ನಾಯಕರು ಸಾಬೀತು ಮಾಡಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.