ಹುಬ್ಬಳ್ಳಿ: ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಅಖಾಡವಾಗಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕೇಸರಿ ಪಾಳಯ ಗೆಲುವಿನ ನಗೆ ಬೀರಿದೆ.
ಪಾಲಿಕೆಯ ನೂತನ ಮಹಾಪೌರರಾಗಿ ಬಿಜೆಪಿ ವೀಣಾ ಬಾರದ್ವಾಡ ಹಾಗೂ ಉಪಮಹಾಪೌರರಾಗಿ ಬಿಜೆಪಿ ಅಭ್ಯರ್ಥಿ ಸತೀಶ ಹಾನಗಲ್ ಆಯ್ಕೆಯಾಗಿದ್ದಾರೆ.
ನೂತನ ಮೇಯರ್, ಉಪಮೇಯರ್ ಅವರನ್ನು ಅಭಿನಂಧಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 12ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ನಮ್ಮ ಪಕ್ಷದ ಶ್ರೀಮತಿ ವೀಣಾ ಬಾರದ್ವಾಡ ಹಾಗೂ ಉಪಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀ ಸತೀಶ ಹಾನಗಲ್ ರವರಿಗೆ ಹಾರ್ದಿಕ ಅಭಿನಂದನೆಗಳು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 12ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.… pic.twitter.com/rjXm4tiG10
— Basavaraj S Bommai (Modi Ka Parivar) (@BSBommai) June 20, 2023
ಇದೇ ವೇಳೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಮತ್ತೆ ಬಿಜೆಪಿ ವಶವಾಗಿರುವುದಕ್ಕೆ ಬಿ.ವೈ.ವಿಜಯೇಂದ್ರ ಕೂಡಾ ಹರ್ಷ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ನಮ್ಮ ಪಕ್ಷದ ಶ್ರೀಮತಿ ವೀಣಾ ಬಾರದ್ವಾಡ ಹಾಗೂ ಉಪಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀ ಸತೀಶ ಹಾನಗಲ್ ಅವರಿಗೆ ಹಾರ್ದಿಕ ಅಭಿನಂದನೆಗಳು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 12ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿದ್ದು, ಗೆಲುವಿಗೆ… pic.twitter.com/dDFyK1cpJX
— Vijayendra Yediyurappa (Modi Ka Parivar) (@BYVijayendra) June 20, 2023
ಗೆಲುವಿಗೆ ಶ್ರಮಿಸಿದ ಸಮಸ್ತ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪಕ್ಷದ ಮುಖಂಡರಿಗೆ ಅನಂತ ಧನ್ಯವಾದಗಳು.