ಬೆಳಗಾವಿ: ಕುಂದಾ ನಗರಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 6ನೇ ಬಾರಿಗೆ ಕಮಲಾ ಅರಳಿದೆ. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆಲವು ಸಾಧಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಪ್ರತಿಷ್ಠಿತ ಅಖಾಡವೆನಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಸ್ಪರ್ಧಿಸಿದ್ದರು. ಮತಎಣಿಕೆಯುದ್ದಕ್ಕೂ ಮುನ್ನಡೆ ಕಾಯ್ದುಕೊಂಡು ಬಂದ ಜಗದೀಶ್ ಶೆಟ್ಟರ್ ಜಯಭೇರಿ ಭಾರಿಸಿ ಕಮಲ ಕಾರ್ಯಕರ್ತರ ವಿಜಯೋತ್ಸವಕ್ಕೆ ಮುನ್ನುಡಿ ಬರೆದರೂ.






















































