ಬೆಂಗಳೂರು: ವಾರಾಂತ್ಯದ ದಿನವಾದ ಶನಿವಾರ ಬೆಳ್ಳಂಬೆಳಿಗ್ಗೆ ದೊಡ್ಡಬಳ್ಳಾಪುರ ಸಮೀಪಸ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಟಾಫೆ ಕಾರ್ಖಾನೆ ಬಳಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಗು ಸೇರಿ ಮೂವರಿಗೆ ಗಾಯಗಳಾಗಿವೆ.
ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿದ್ದು, ಮಹಿಳೆಗೆ ಗಂಭೀರ ಗಾಯಗಳಾಗಿವೆ. ದೇಹ ಭಾಗಶಃ ಅರ್ಧ ಬಾಗದಷ್ಷು ಸುಟ್ಟಿದೆ. ವ್ಯಕ್ತಿ ಮತ್ತು ಮಗು ದೇಹದ ಶೇಕಡಾ ಇಪ್ಪತ್ತರಷ್ಟು ಭಾಗ ಸುಟ್ಟಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾತ್ರಿ ಗ್ಯಾಸ್ ಆಫ್ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ್ದು, ಬೆಳಿಗ್ಗೆ ಬಾಗಿಲು ತೆರೆದ ತಕ್ಷಣ ಮನೆಮುಂದೆ ಕಸಕ್ಕೆ ಬೆಂಕಿ ಹಚ್ಚಿದ್ದು,ಅದರಿಂದ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.