ರಾಜಧಾನಿ ಬೆಂಗಳೂರಿನ ಮಂದಿಗೆ ಆರಾಮದಾಯಕ ಪರಿಸರ- ಸ್ನೇಹಿ ಪ್ರಯಾಣ ವ್ಯವಸ್ಥೆ ಕಲ್ಪಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 921 ಟಾಟಾ ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸುತ್ತಿದೆ. ಪ್ರಯಾಣಿಕರು ಶೀಘ್ರದಲ್ಲೇ ಆರಾಮದಾಯಕ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಆನಂದಿಸಲು ಸಾಧ್ಯವಾಗಲಿದೆ.
ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಬಸ್ನ ಪ್ರಥಮ ‘ಪ್ರೊಟೊಟೈಪ್’ ಮಾದರಿಯನ್ನು ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿ ಸತ್ಯವತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ಸರ್ಕಾರ ಹಾಗೂ ಸಾರ್ವಜನಿಕ ವ್ಯವಹಾರ, ಗ್ಲೋಬಲ್ ಮುಖ್ಯಸ್ಥರಾದ ರೋಹಿತ್ ಶ್ರೀವಾಸ್ತವ, ಸುಶಾಂತ್ ನಾಯಕ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಟಿ.ಎಂ.ಎಲ್ ಅಸೀಮ್ ಮುಖ್ಯೋಪಾಧ್ಯಾಯ್, ಹಿರಿಯ ಪ್ರಧಾನ ವ್ಯವಸ್ಥಾಪಕರು ದಕ್ಷಿಣ ಟಿ.ಎಂ.ಎಲ್ ಕೆ.ಜಿ.ಪ್ರಸಾದ್, ಅರವಿಂದ್ ಮೋಟಾರ್ಸ್ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಕಿಶೋರ್ ರಾವ್, ಬಿಎಂಟಿಸಿ ಹಾಗೂ ಟಾಟಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಬೆಂಗಳೂರಿನ ಜನತೆಯು, ಬಿ.ಎಂ.ಟಿ.ಸಿ ಯ ನೂತನ ವಿದ್ಯುತ್ ವಾಹನಗಳಲ್ಲಿ ಪ್ರಯಾಣಿಸಿ ಮಾಲಿನ್ಯ ರಹಿತ ನಗರದ ಅನುಭವವನ್ನು ಪಡೆಯಲಿದ್ದಾರೆ. ಕರ್ನಾಟಕ ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ 4000 ಹೊಸ ವಾಹನಗಳನ್ನು ಒದಗಿಸುವ ಮತ್ತು 13000 ಸಿಬ್ಬಂದಿಗಳ ನೇಮಕಾತಿಗೆ ಅನುಮತಿ ಕೊಡುವ ಜೊತೆಗೆ ಬಜೆಟ್ ನಲ್ಲಿ ರೂ.500 ಕೋಟಿಗಳನ್ನು ನಿಗಮಗಳಿಗೆ ಬಸ್ ಖರೀದಿಗಾಗಿ ವಿಸ್ತರಿಸುವುದಾಗಿ ತಿಳಿಸಿದರು.
ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಘಟಕ ವ್ಯವಸ್ಥಾಪಕರುಗಳಿಗೆ ನೂತನ ವಾಹನಗಳನ್ನು ಒದಗಿಸಲಾಗಿದ್ದು, ಇದರಿಂದ ಅವರು ಬಸ್ ನಿಲ್ದಾಣಗಳು, ಮೋಟಾರು ವಾಹನ ಇಲಾಖೆ, ಅಪಘಾತ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಬೇಡಿ ನೀಡಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬಹುದೆಂದು ತಿಳಿಸಿದರು.
ನೂತನ 921 ಎಲೆಕ್ಟ್ರಕ್ ಬಸ್ಸುಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನ ಬಲಕ್ಕೆ ಈ ಆರ್ಥಿಕ ವರ್ಷದೊಳಗಾಗಿ ಹಂತ-ಹಂತವಾಗಿ ಸೇರ್ಪಡೆ ಮಾಡುವುದಾಗಿ ತಿಳಿಸಿದ ಸಚಿವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಈ ನೂತನ 921 ಟಾಟಾ ವಿದ್ಯುತ್ ವಾಹನಗಳನ್ನು ಭಾರತ ಸರ್ಕಾರದ ಫೇಮ್-2 ಯೋಜನೆಯಡಿಯಲ್ಲಿ ಜಿ.ಸಿ.ಸಿ ಆಧಾರದ ಮೇಲ್ ಕಾರ್ಯಾಚರಣೆ ಮಾಡಲಿದೆ ಎಂದರು.
ಕಾರ್ಯಾಚರಣೆಯ ಪ್ರಮುಖ ಅಂಶಗಳು ಹೀಗಿವೆ:
-
ಬಸ್ಸುಗಳು 12.0 ಮೀಟರ್ ಉದ್ದದ, low floor ಎಲೆಕ್ಟ್ರಿಕ್ ಬಸ್ಸುಗಳಾಗಿರುತ್ತದೆ ಹಾಗೂ Floor ಎತ್ತರ: 400 mm ಆಗಿರುತ್ತದೆ.
-
ಈ ಬಸ್ 35 ಪ್ರಯಾಣಿಕರಿಗೆ ಆರಾಮದಾಯಕ ಆಸನ ಮತ್ತು ಅದರ ಕೆಳ-ಮಹಡಿ ಸಂರಚನೆಯೊಂದಿಗೆ ಸುಲಭ ಪ್ರವೇಶ ಮತ್ತು ಹೊರಹೋಗುವಿಕೆಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ.
-
ಬೆಂ.ಮ.ಸಾ.ಸಂಸ್ಥೆಯು 1500 ಎಲೆಕ್ಟ್ರಿಕ್ ಬಸ್ಸುಗಳನ್ನು ತನ್ನ ವಾಹನ ಬಲಕ್ಕೆ ಸೇರ್ಪಡೆಗೊಳಿಸಲು ಗ್ರ್ಯಾಂಡ್ ಚಾಲೆಂಜ್ ನಲ್ಲಿ ಭಾಗವಹಿಸಿತ್ತು.
-
GCC ಆಧಾರದಲ್ಲಿ ಈ ಬಸ್ಸುಗಳ ಪ್ರತಿ ಕಿ.ಮೀ ಕಾರ್ಯಾಚರಣೆಯ ದರ ರೂ.41.01 ಮೊತ್ತವಾಗಿರುತ್ತದೆ.
-
ಭಾರಿ ಕೈಗಾರಿಕ ಸಚಿವಾಲಯ, ಕೇಂದ್ರ ಸರ್ಕಾರ ವತಿಯಿಂದ 921 ಟಾಟಾ ಎಲೆಕ್ಟ್ರಿಕ್ ಬಸ್ಸುಗಳಿಗೆ ಸಹಾಯಧನವನ್ನು ಒದಗಿಸಲಾಗಿದೆ.
-
ಈ ಸಹಾಯಧನದ ಅನ್ವಯ ಬೆಂ.ಮ..ಸಾ.ಸಂಸ್ಥೆಯು ಒಟ್ಟು 921 ಎಲೆಕ್ಟ್ರಿಕ್ ಬಸ್ಸುಗಳನ್ನು Gross Cost Contract (GCC) Model ಆಧಾರದ ಮೇಲೆ ಕಾರ್ಯಾಚರಣೆ ಮಾಡಬಹುದಾಗಿರುತ್ತದೆ.
-
ಪ್ರತಿ ಬಸ್ಸನ್ನು45 ನಿಮಿಷ Opportunity Charging ಮಾಡಲಾಗುವುದು.
-
ಈ ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಣೆಗಾಗಿ ಶಾಂತಿನಗರ, ಜಯನಗರ, ಹೆಣ್ಣೂರು, ದೀಪಾಂಜಲಿನಗರ, ರಾಜರಾಜೇಶ್ವರಿನಗರ, ಪೀಣ್ಯ 2ನೇ ಹಂತ, ಜಿಗಣಿ, ಕೆ.ಆರ್.ಪುರಂ, ಸೀಗೇಹಳ್ಳಿ, ಹೊಸಕೋಟೆ ಸಹಿತ 10 ಘಟಕಗಳನ್ನು ಗುರುತಿಸಲಾಗಿದೆ..
-
ಪ್ರಾಯೋಗಿಕವಾಗಿ ಕಾರ್ಯಚರಣೆ ಮಾಡುವ ಮಾರ್ಗ: 96-ಎ (ಮಾರ್ಗ: ಕೆಂಪೇಗೌಡ ಬಸ್ ನಿಲ್ದಾಣ, ಸುಜಾತ ಟಾಕೀಸ್, ಇಂಡಸ್ಟ್ರಿಯಲ್ ಟೌನ್ ರಾಜಾಜಿನಗರ, ಹಾವನೂರು ವೃತ್ತ, ಮೋದಿ ಆಸ್ಪತ್ರೆ, ಹರಿಶ್ಚಂದ್ರ ಘಾಟ್, ಸೆಂಟ್ರಲ್, ಕೆಂಪೇಗೌಡ ಬಸ್ ನಿಲ್ದಾಣ) ಏಕ ದುಂಡು ಸುತ್ತುವಳಿ ಕಿ.ಮೀ. 14.7 ಕಿ.ಮೀ, ಒಟ್ಟು ಅನುಸೂಚಿ ಕಿ.ಮೀ-202.4 ಕಿ.ಮೀ.






















































ಕಾರ್ಯಾಚರಣೆಯ ಪ್ರಮುಖ ಅಂಶಗಳು ಹೀಗಿವೆ: