ಮಂಗಳೂರು; ಬಂದರು ನಗರಿ ಮಂಗಳೂರು ಜನರನ್ನೂ ಬಾಂಬ್ ಬೆದರಿಕೆಯ ಗುಮ್ಮ ಕಾಡತೊಡಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಚೇರಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು ಇದರಿಂದ ನಿಲ್ದಾಣ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಲಿಬಿಲಿಗೊಂಡ ಪ್ರಸಂಗ ನಡೆದಿದೆ.
ಉಗ್ರರ ಹೆಸರಲ್ಲಿ ಇ-ಮೇಲ್ ಸಮಧೇಶ ಬಂದಿದೆ ಎನ್ನಲಾಗಿದೆ. ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ. ಏಪ್ರಿಲ್ 29ರಂದು ಈ ಬೆದರಿಕೆ ಬಂದಿದೆ ಎನ್ನಲಾಗಿದ್ದು, ಈ ಕುರಿತಂತೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





















































