ಬೆಂಗಳೂರು: ಉದ್ಯಾನ ನಗರಿಯ ಬೋರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆವರಣದಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ”ಯ ನೂತನ ಕಟ್ಟಡ ಲೋಕಾರ್ಪಣೆಯಾಗಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ವತಿಯಿಂದ ಶಿವಾಜಿನಗರದ ಬೋರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಆಯೋಜಿಸಲಾದ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಈ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.