ಹಾಸನ: ಹಾಸನದ ಬಸವನಹಳ್ಳಿ ಬಳಿ 12 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದಾರೆ.
ಚಿಕ್ಕಹೊನ್ನೇನಹಳ್ಳಿ ನಿವಾಸಿಗಳಾದ ವೆಂಕಟೇಶ್- ರೂಪಾ ದಂಪತಿ ಪುತ್ರ 12 ವರ್ಷದ ಕುಶಾಲ್, ಮಂಗಳವಾರ ಸಂಜೆ ಮಕ್ಕಳ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿದ್ದ. ಇದ್ದಕ್ಕಿದ್ದಂತೆ ಆತ ನಾಪತ್ತೆಯಾಗಿದ್ದಾನೆ. ಹುಡುಕಾಡಿದರೂ ಆತನ ಸುಳಿವೇ ಸಿಗಲಿಲ್ಲ. ಆ ಪ್ರದೇಶದಲ್ಲಿ ಇತ್ತೀಚೆಗೆ ಚಿರತೆ ಹಾವಳಿ ಬೆಳಕಿಗೆ ಬಂದಿತ್ತು. ಅದೇ ರೀತಿ ಮಗುವನ್ನು ಚಿರತೆ ಹೊತ್ತೊಯ್ದಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಶೋಧ ನಡೆಸಿದ್ದರೂ ಬಾಲಕ ಪತ್ತೆಯಾಗಿರಲಿಲ್ಲ.
ಈ ನಡುವೆ ರೈಲ್ವೆ ಹಳಿ ಬಳಿ ಬುಧವಾರ ಮಧ್ಯಾಹ್ನ ಬಾಲಕನ ಮೃತದೇಹ ಪತ್ತೆಯಾಗಿದೆ. ಕೊಲೆಯಾದ ರೀತಿಯಲ್ಲಿ ಶವ ಪತ್ತೆಯಾಗಿದ್ದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.