ಅಂದು ಸಿಎಂ ಯಡಿಯೂರಪ್ಪ ರಾಜೀನಾಮೆ.. ಇದೀಗ ಬಿಎಸ್‌ವೈ ಆಪ್ತ ಗುಡ್ ಬೈ.. ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆ
ಬೆಂಗಳೂರು: ಕೆಲ ಸಮಯದ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಇದೀಗ ಅವರ ಆಪ್ತ ಶಾಸಕ ಸುರೇಶ್ ಗೌಡ ಸರದಿ. ಅಚ್ಚರಿಯ ತೀರ್ಮಾನವೊಂದರಲ್ಲಿ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್ ಗೌಡ ರಾಜಿನಾಮೆ ನೀಡಿದ್ದಾರೆ.
ಈ ಕುರಿತಂತೆ ಶಾಸಕ ಸುರೇಶ್ ಗೌಡ ಅವರು ತಮ್ಮ ಫೇಸ್ ಬುಕ್ ಪೇಜ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿರುವ ಅವರು, ತುಮಕೂರು ಜಿಲ್ಲೆಯ ಜನರ ಸಹಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
ಗ್ರಾಮಾಂತರ ಕ್ಷೇತ್ರದ ಜನರಿಗೆ ಹೆಚ್ಚಿನ ಸಮಯ ಕೊಡೋಕೆ ಆಗುತ್ತಿಲ್ಲ, ಹೀಗಾಗಿ ಅವರ ಜೊತೆಯಲ್ಲೇ ಇರಬೇಕು ಎಂದು ನಿರ್ಧರಿಸಿ ರಾಜಿನಾಮೆ ನೀಡಿದ್ದೇನೆ ಎಂದು ಸುರೇಶ್ ಗೌಡ ಹೇಳಿದ್ದಾರೆ
ಕಳೆದ ಒಂದೂವರೆ ವರ್ಷದ ಹಿಂದೆ ಜಿಲ್ಲಾ ಬಿಜೆಪಿ ಸ್ಥಾನ ಅಲಂಕರಿಸಿದ್ದ ಸುರೇಶ್ ಗೌಡ ಇದೀಗ ದಿಢೀರನೆ ಗುಡ್ ಬೈ ಹೇಳಿರುವುದು ಪಕ್ಷದ ಕಾರ್ಯಕರ್ತರ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಒಂದು ವೇಳೆ ಕ್ಷೇತ್ರದ ಜನರಿಗಾಗಿ ರಾಜೀನಾಮೆ ನೀಡಿದ್ದೇ ಆಗಿದ್ದರೆ ಮೊದಲೇ ಈ ಬಗ್ಗೆ ಚರ್ಚಿಸುತ್ತಿದ್ದರು. ಆದರೆ ದಿಢೀರನೆ ರಾಜೀನಾಮೆ ನೀಡಿರುವ ಬೆಳವಣಿಗೆ ಅನೇಕಾನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.





















































