ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನಪರ, ಅಭಿವೃದ್ಧಿ ಪರ ಬಜೆಟ್ ಮಂಡಿಸಿದ್ದಾರೆ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಬಣ್ಣಿಸಿದ್ದಾರೆ.
ಸವಾಲುಗಳ ನಡುವೆಯೂ ಇಂದು ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರಕ್ಕೂ ನ್ಯಾಯ ಒದಗಿಸಲಾಗಿದ್ದು, ಇದು ಆರ್ಥ ವ್ಯವಸ್ಥೆಗೆ ಪುನಶ್ಚೇತನ ನೀಡಲಿದೆ. ಜೊತೆಗೆ ರಾಜ್ಯದಲ್ಲಿ ಇನ್ನಷ್ಟು ಆರ್ಥಿಕ ಚಟುವಟಿಕೆಗಳಿಗೆ ʼವೇಗವರ್ಧಕ’ ನೀಡುವುದರಲ್ಲಿ ಅನುಮಾನವೇ ಇಲ್ಲ ಎಂದು ಸಚಿವ ನಿರಾಣಿ ಪ್ರತಿಕ್ರಿಯಿಸಿದ್ದಾರೆ.
ಜನಸಾಮಾನ್ಯರು ಹಾಗೂ ಮಧ್ಯಮವರ್ಗದರಿಗೆ ಹೊರೆಯಾಗದಂತೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸದೆ, ಬಡವರು, ಶೋಷಿತರು, ದೀನದಲಿತರು, ಕಾರ್ಮಿಕರು, ಮಹಿಳೆಯರು, ಹಿರಿಯ ನಾಗರಿಕರು, ಸೇರಿದಂತೆ ಎಲ್ಲರಿಗೂ ಸಂತೃಪ್ತಿಪಡಿಸುವ ಮೂಲಕ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ ನಮ್ಮ ಹೆಮ್ಮೆಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಅಭಿನಂಧಿಸುವುದಾಗಿ ನಿರಾಣಿ ಹೇಳಿದ್ದಾರೆ.