ಬೆಂಗಳೂರು: ಮುಂದಿನ ತಿಂಗಳ 8 ರಂದು ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಬಜೆಟ್ ಮಂಡನೆಯಾಗಲಿದೆ.
2021-22ನೇ ಸಾಲಿನ ಆಯವ್ಯಯವನ್ನು ಮಾರ್ಚ್ 8ರಂದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಬಸವರಾಜ್ ಬೊಮ್ಮಾಯಿ ಈ ಬಜೆಟ್ ಮಂಡನೆ ಕುರಿತು ಮಾಹಿತಿ ಹಂಚಿಕೊಂಡರು.
ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಕೊರೋನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಣಕಾಸಿನ ಇತಿಮಿತಿಯೊಳಗೆ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಲಾಗುತ್ತಿದೆ.