ಬೆಂಗಳೂರು: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಬೆಂಗಳೂರಿನ ನ್ಯಾಯಾಲಯವು ಸಿಎಂ ಯಡಿಯೂರಪ್ಪ, ವಿಜಯೇಂದ್ರ ಸಹಿತ ಬಿಎಸ್ವೈ ಕುಟುಂಬ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಲು ನಿರಾಕರಿಸಿದೆ. ಅಷ್ಟೇ ಅಲ್ಲ, ಈ ಕುರಿತಂತೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಖಾಸಿ ದೂರಿನ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ಗೆ ಅನುಮತಿ ಪಡೆಯದ ತಾಂತ್ರಿಕ ಜಾರಣದಿಂದಾಗಿ ಈ ಅರ್ಜಿಯನ್ನು ನ್ಯಾಯಾಲಯ ವಜಾಮಾಡಿದೆ.