ಬೆಂಗಳೂರು: ಯಡಿಯೂರಪ್ಪ ವಿರುದ್ದದ ಪ್ರಕರಣ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಪ್ರಕರಣದ ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಎಂದಿರುವ ಪರಮೇಶ್ವರ್, ಪ್ರಕರಣ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.
ಮಹಿಳೆಯು ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಈ ಪ್ರಕರಣ ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದೆ. ಯಾವುದೇ ವಿಷಯ ಆದರೂ ಎಚ್ಚರಿಕೆಯಿಂದ ಹೇಳಬೇಕಾಗುತ್ತದೆ ಎಂದವರು ತಿಳಿಸಿದ್ದಾರೆ.


























































