ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆಯೇ ಬಿಜೆಪಿ ಪಾಲಯದಲ್ಲೂ ಬೆಳವಣಿಗೆಗಳು ಗರಿಗೆದರಿವೆ. ಕೆಲ ದಿನಗಳ ಹಿಂದಷ್ಟೇ ಸಿ.ಟಿ.ರವಿ ಅವರು ಸಂಪುಟದಿಂದ ನಿರ್ಗಮಿಸಿದ ಬೆನ್ನಲ್ಲೇ ಯಡಿಯೂರಪ್ಪ ಅವರ ಆಪ್ತ ಎಂ.ಬಿ.ಮರಂಕಲ್ ಅವರೂ ಸಂಪುಟ ದರ್ಜೆಯ ಹುದ್ದೆಯಿಂದ ದೂರವಾಗಿದ್ದಾರೆ.
ಅಚ್ಚರಿಯ ನಿರ್ಧಾರವೊಂದರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಸಲಹೆಗಾರ ಎಂ.ಬಿ.ಮರಂಕಲ್ ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ.
ರಾಷ್ಟ್ರೀಯ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಎಂ.ಬಿ.ಮರಂಕಲ್ ಇತ್ತೀಚಿನ ವರ್ಷಗಳಲ್ಲಿ ಯಡಿಯೂರಪ್ಪ ಜೊತೆ ಗುರುತಿಸಿಕೊಂಡಿದ್ದರು. ಆಪರೇಷನ್ ಕಮಲ ವಿಚಾರದಲ್ಲೂ ಅವರ ಹೆಸರು ಥಳುಕುಹಾಕಿಕೊಂಡಿತ್ತು. ಯಡಿಯೂರಪ್ಪ ಅವರು ಈ ಆಪ್ತನಿಗೆ ರಾಜ್ಯ ಸರ್ಕಾರದ ಸಂಪುಟ ದರ್ಜೆ ಸ್ಥಾನಮಾನದ ಹುದ್ದೆನೀಡಿ ತಮ್ಮ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಿದ್ದರು. ಆದರೆ ಇದೀಗ ಅವರ ನೇಮಕವನ್ನು ರದ್ದುಪಡಿಸಿರುವ ಬೆಳವಣಿಗೆ ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.