ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಕುಮಾರಕೃಪ ಅತಿಥಿಗೃಹಕ್ಕೆ ಆಗಮಿಸಿದ ವೆಂಕಯ್ಯನಾಯ್ಡು ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.