ದೆಹಲಿ: ಸದ್ಯಕ್ಕೆ ಸಿಎಂ ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆಯದಿರಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಈ ಕುರಿತಂತೆ ಮಾಹಿತಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಳಿಬಂದಿದೆ.
ಸದ್ಯ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಇಂತಹಾ ಸಂದರ್ಭದಲ್ಲಿ ಮುಖ್ಯಮಂತ್ರಿಯಿಂದ ರಾಜೀನಾಮೆ ಪಡೆದು ಗೊಂದಲದ ಪರಿಸ್ಥಿತಿ ನಿರ್ಮಾಣ ಮಾಡುವುದು ಸರಿಯಲ್ಲ ಎಂಬ ನಿರ್ಧಾರಕ್ಕೆ ವರಿಷ್ಠರು ಬಂದಿದ್ದಾರೆ ಎನ್ನಲಾಗುತ್ತಿದೆ.
ಒಂದೆರಡು ವಾರಗಳವರೆಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರಿಯಲಿ ಆವರೆಗೂ ಪರ್ಯಾಯ ನಾಯಕನ ಆಯ್ಕೆ ಪ್ರಸ್ತಾಪವೂ ಬೇಡ ಎಂಬ ತೀರ್ಮಾನವನ್ನು ವರಿಷ್ಠರು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಇಂದು ಸಂಜೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂಬ ವರಿಷ್ಠರ ಸೂಚನೆಗಾಗಿ ನಾಳೆ (ಸೋಮವಾರ) ಬೆಳಿಗ್ಗೆವರೆಗೂ ಕಾದು ನೋಡೋಣ ಎಂದಿದ್ದರು.