ಬೆಂಗಳೂರು: ಹಿರಿಯ ರೈತಪರ ಹೋರಾಟಗಾರರು, ಮಾಜಿ ಸಚಿವರು, ಮಾಜಿ ಸಂಸದ ಜಿ.ಮಾದೇಗೌಡರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಜಿ.ಮಾದೇಗೌಡರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಹಿರಿಯ ಹೋರಾಟಗಾರರನ್ನು ಕಳೆದುಕೊಂಡಂತಾಗಿದೆ ಎಂದು ಬಿಎಸ್‌ವೈ ದುಃಖ ಹಂಚಿಕೊಂಡಿದ್ದಾರೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮುಖ್ಯಮಂತ್ರಿಯವರು ಪ್ರಾರ್ಥಿಸಿದ್ದಾರೆ.
ಹಿರಿಯ ರೈತಪರ ಹೋರಾಟಗಾರರು, ಮಾಜಿ ಸಚಿವರು, ಮಾಜಿ ಸಂಸದರಾದ ಶ್ರೀ ಜಿ.ಮಾದೇಗೌಡರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಹಿರಿಯ ಹೋರಾಟಗಾರರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ
— B.S.Yediyurappa (Modi Ka Parivar) (@BSYBJP) July 17, 2021
ಇದೇ ವೇಳೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಹಿರಿಯ ರೈತ ಹೋರಾಟಗಾರ ಜಿ.ಮಾದೇಗೌಡರ ನಿಧನಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.
ಕಾವೇರಿ ನದಿ ನೀರಿಗಾಗಿ ನಡೆದ ಹೋರಾಟಗಳಲ್ಲಿ ಸದಾ ಮುಂದಿದ್ದ, ರೈತಪರ ಕಾಳಜಿಯ ಹಿರಿಯ ನಾಯಕರು, ಮಾಜಿ ಸಂಸದ ಜಿ.ಮಾದೇಗೌಡರು ವಿಧಿವಶರಾಗಿರುವುದು ಅತೀವ ದುಃಖ ತಂದಿದೆ. ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ನೋವು ನೀಗುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಕಾವೇರಿ ನದಿ ನೀರಿಗಾಗಿ ನಡೆದ ಹೋರಾಟಗಳಲ್ಲಿ ಸದಾ ಮುಂದಿದ್ದ, ರೈತಪರ ಕಾಳಜಿಯ ಹಿರಿಯ ನಾಯಕರು, ಮಾಜಿ ಸಂಸದರಾದ ಶ್ರೀ ಜಿ.ಮಾದೇಗೌಡರು ವಿಧಿವಶರಾಗಿರುವುದು ಅತೀವ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ನೋವು ನೀಗುವ ಶಕ್ತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ 🙏 pic.twitter.com/6cJKlbqbDZ
— Vijayendra Yediyurappa (Modi Ka Parivar) (@BYVijayendra) July 17, 2021